ರಾಮದುರ್ಗಕ್ಕೆ ಮುಂಬೈನಿಂದ ಬಂದಿದ್ದ ಗರ್ಭಿಣಿಗೆ ಕೋವಿಡ್ ಪಾಸಿಟಿವ್
Team Udayavani, May 23, 2020, 2:19 PM IST
ಬೆಳಗಾವಿ: ರಾಮದುರ್ಗ ತಾಲೂಕಿನ ಶಿವಪೇಠೆ ಗ್ರಾಮಕ್ಕೆ ಮುಂಬೈನಿಂದ ಆಗಮಿಸಿದ್ದ 27 ವರ್ಷದ ಗರ್ಭಿಣಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಮುಂಬೈನಿಂದ ಬಂದಿದ್ದ ಗರ್ಭಿಣಿಯನ್ನು ರಾಮದುರ್ಗ ನಲ್ಲಿ ಬಿಸಿಎಂ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಮೇ 17ರಂದು ಮಹಿಳೆ ಮುಂಬೈನಿಂದ ಆಗಮಿಸಿದ್ದು, ಕೂಡಲೇ ರಾಮದುರ್ಗದಲ್ಲಿ ತಪಾಸಣೆ ನಡೆಸಿ ಅಲ್ಲಿಯೇ ಕ್ವಾರಂಟೈನ್ ಮಾಡಿ ಇಡಲಾಗಿತ್ತು.
ಸದ್ಯ ಜಿಲ್ಲೆಯಲ್ಲಿ ಹೊಸ ಪಾಸಿಟಿವ್ ಕೇಸುಗಳು ಹೊರ ಬರುತ್ತಿರುವುದರಿಂದ ಆತಂಕ ಹೆಚ್ಚಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 121 ಜಿಲ್ಲೆಯ ಸೋಂಕಿತರು ಹಾಗೂ 8 ಜನ ಅನ್ಯ ರಾಜ್ಯದ (ಬಾಗಲಕೋಟೆ) ಸೋಂಕಿತರು ಬೆಳಗಾವಿಯಲ್ಲಿದ್ದಾರೆ. ಒಟ್ಟು 129 ಸೋಂಕಿತರ ಸಂಖ್ಯೆ ಹೆಚ್ಚಾದಂತಾಗಿದೆ.
ರಾಜ್ಯದಲ್ಲಿ ಇಂದು ಹೊಸ 196 ಸೋಂಕು ಪ್ರಕರಣಗಳು ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ. 42 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇಬ್ಬರು ಸೋಂಕಿತರು ಕೋವಿಡ್-19 ಅಲ್ಲದ ಕಾರಣದಿಂದ ಮರಣಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.