ಗಣಿಜಿಲ್ಲೆ ಬಳ್ಳಾರಿಯಲ್ಲಿ ಮತ್ತೆ ಮೂರು ಕೋವಿಡ್ 19 ಸೋಂಕು ಪ್ರಕರಣ ಪತ್ತೆ
Team Udayavani, May 23, 2020, 3:17 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ ಮೂರು ಕೋವಿಡ್-19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಪ್ರಕರಣಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ನಗರ ಹೊರವಲಯದ ಅಲ್ಲೀಪುರ ವಸತಿ ನಿಲಯದಲ್ಲಿ ಕ್ವಾರಂಟೈನ್ ನಲ್ಲಿ ಇದ್ದ ಇಬ್ಬರು ಪುರುಷ, ಒಬ್ಬ ಮಹಿಳೆಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ. ಸೋಂಕಿತ ಮೂವರು ದೆಹಲಿ, ಮುಂಬೈನಿಂದ ಬಂದಿರುವ ಟ್ರಾವೆಲ್ ಹಿಸ್ಟರಿಯನ್ನು ಹೊಂದಿದ್ದಾರೆ. ಸೋಂಕಿತ ಮೂವರನ್ನು ಇದೀಗ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ.
ಇಂದಿನ ಮೂರು ಸೇರಿ ಈವರೆಗೆ ಒಟ್ಟು 33 ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, ಇವರಲ್ಲಿ ಹೊಸಪೇಟೆಯ ಒಂದೇ ಕುಟುಂಬದ 11, ಬಳ್ಳಾರಿ ನಗರದ 2, ಸಂಡೂರು ತಾಲೂಕು ಕೃಷ್ಣಾನಗರ ಗ್ರಾಮದ 1, ಸಿರುಗುಪ್ಪ ತಾಲೂಕು ಎಚ್.ಹೊಸಳ್ಳಿ ಗ್ರಾಮದ 1 ಸೇರಿ ಒಟ್ಟು 15 ಜನರು ಬಿಡುಗಡೆಯಾಗಿ ಮನೆ ಸೇರಿದ್ದಾರೆ. ಒಬ್ಬರು ಮೃತಪಟ್ಟಿದ್ದು, 17 ಸಕ್ರೀಯ ಪ್ರಕರಣಗಳು ಇವೆ.
ರಾಜ್ಯದಲ್ಲಿ ಇಂದು ಹೊಸ 196 ಸೋಂಕು ಪ್ರಕರಣಗಳು ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ. 42 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇಬ್ಬರು ಸೋಂಕಿತರು ಕೋವಿಡ್-19 ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.