36 ಗಂಟೆಗಳ ಲಾಕ್ ಡೌನ್, ಉಲ್ಲಂಘಿಸಿದರೆ ಕಠಿಣ ಪೊಲೀಸ್ ಕ್ರಮ: ಉಡುಪಿ ಡಿಸಿ ಜಿ.ಜಗದೀಶ್
Team Udayavani, May 23, 2020, 4:06 PM IST
ಉಡುಪಿ: ಜಿಲ್ಲೆಯಲ್ಲಿ ಇಂದು ರಾತ್ರಿಯಿಂದ 36 ಗಂಟೆಗಳ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದ್ದು, ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಕಠಿಣ ಪೊಲೀಸ್ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.
ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು (ಮೇ 23) ರಾತ್ರಿ 7 ಗಂಟೆಯಿoದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ 36 ಗಂಟೆಗಳ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದೆ. ಲಾಕ್ ಡೌನ್ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುವವರ ವಿರುದ್ದ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಈ 36 ಗಂಟೆಗಳ ಲಾಕ್ ಡೌನ್ ಅವಧಿಯಲ್ಲಿ ಅವಶ್ಯಕ ವಸ್ತುಗಳಾದ ಹಾಲು, ದಿನಪತ್ರಿಕೆ, ಔಷಧ ಅಂಗಡಿಗಳು ಮತ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಅನುಮತಿ ನೀಡಿದ್ದು, ಇದರ ಹೊರತು ಇತರೇ ಯಾವುದೇ ಚಟುವಟಕೆಗಳಿಗೆ ಅನುಮತಿ ಇಲ್ಲ. ಈಗಾಗಲೇ ತಹಶೀಲ್ದಾರ್ ಅವರಿಂದ ಮದುವೆಗೆ ಅನುಮತಿ ಪಡೆದಿರುವವರು ಮದುವೆ ಮಾಡಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್.ರಾಜಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.