ಕಲಬುರಗಿಯಲ್ಲಿ ಮತ್ತೆ ಆರು ಜನರಿಗೆ ಕೋವಿಡ್ ದೃಢ: 141ಕ್ಕೆ ಸೋಂಕಿತರ ಸಂಖ್ಯೆ ಏರಿಕೆ
Team Udayavani, May 24, 2020, 2:40 PM IST
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮುಂದುವರೆದಿದ್ದು, ರವಿವಾರ ಮತ್ತೆ ಆರು ಜನರಿಗೆ ಮಹಾಮಾರಿ ರೋಗ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ.
ಹೊರ ರಾಜ್ಯಗಳಿಂದ ಬಂದವರಿಗೇ ಕೋವಿಡ್ ಸೋಂಕು ಪತ್ತೆಯಾಗಿದೆ. ಐವರು ಸೋಂಕಿತರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ, ಮತ್ತೋರ್ವ ಆಂಧ್ರ ಪ್ರದೇಶದ ಪ್ರವಾಸ ಹಿನ್ನೆಲೆ ಹೊಂದಿದ್ದಾರೆ. ಇದರಲ್ಲಿ ಓರ್ವ ಮಹಿಳೆಯೂ ಸೇರಿದ್ದಾರೆ.
ಮಹಾರಾಷ್ಟ್ರದಿಂದ ಬಂದ 32 ವರ್ಷದ ಪುರುಷ (ಪಿ-1965), 20 ವರ್ಷದ ಯುವಕ (ಪಿ-1966), 48 ವರ್ಷದ ಪುರುಷ (ಪಿ-1967), 50 ವರ್ಷದ ಮಹಿಳೆ (ಪಿ-1968), 45 ವರ್ಷದ ಪುರುಷ (ಪಿ-2000) ಹಾಗೂ ಆಂಧ್ರಪ್ರದೇಶದದಿಂದ 30 ವರ್ಷದ ಪುರುಷ (ಪಿ-2001)ನಿಗೆ ಕೋವಿಡ್ ಸೋಂಕು ಖಚಿತವಾಗಿದೆ.
ಜಿಲ್ಲೆಯ ಒಟ್ಟು 141 ಕೋವಿಡ್ ಸೋಂಕಿತರ ಪೈಕಿ ಇದುವರೆಗೆ 62 ಜನ ಗುಣಮುಖರಾಗಿದ್ದಾರೆ. ಏಳು ಜನರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಉಳಿದಂತೆ 72 ಜನ ಕೋವಿಡ್ ಪೀಡಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.