ಮಹಾರಾಷ್ಟ್ರದಲ್ಲಿ 50 ಸಾವಿರ ಸೋಂಕು

ಒಂದೇ ದಿನ 3 ಸಾವಿರ ಸೋಂಕು, 58 ಸಾವು

Team Udayavani, May 25, 2020, 5:59 AM IST

ಮಹಾರಾಷ್ಟ್ರದಲ್ಲಿ 50 ಸಾವಿರ ಸೋಂಕು

ಹೊಸದಿಲ್ಲಿ/ಮುಂಬಯಿ: ದೇಶದ ಕೋವಿಡ್ 19 ಸೋಂಕು ನಿಯಂತ್ರಣವಿಲ್ಲದೆ ಸಾಗುತ್ತಿದೆ. ಮಹಾರಾಷ್ಟ್ರದಲ್ಲಿ ರವಿವಾರ ಒಂದೇ ದಿನ 3,041 ಕೇಸುಗಳು ದಾಖಲಾಗಿವೆ. ಈ ಮೂಲಕ ಅಲ್ಲಿ ಸೋಂಕಿನ ಪ್ರಕರಣ 50 ಸಾವಿರ ದಾಟಿದೆ. ಜತೆಗೆ 58 ಮಂದಿ ಕೊನೆಯುಸಿ ರೆಳೆದಿದ್ದಾರೆ.

ಮುಂಬಯಿಯಲ್ಲಿಯೇ 1,635 ಸೋಂಕು ಖಚಿತವಾಗಿದೆ. ಹೀಗಾಗಿ, ದೇಶದ ವಾಣಿಜ್ಯ ನಗರಿ ಎಂಬ ಖ್ಯಾತಿ ಪಡೆದಿರುವ ಮುಂಬಯಿಯಲ್ಲಿ ಕೋವಿಡ್ 19 ನಿಯಂತ್ರಣ ಸಾಧ್ಯವಾಗಿಲ್ಲವೇ ಎಂಬ ಆತಂಕ ವ್ಯಕ್ತವಾಗಿದೆ. ಸತತ ಎಂಟು ದಿನಗಳ ಕಾಲ ರಾಜ್ಯದಲ್ಲಿ ದಿನವೂ 2 ಸಾವಿರಕ್ಕಿಂತ ಹೆಚ್ಚಿನ ಸೋಂಕು ಪ್ರಕರಣಗಳು ದೃಢಪಟ್ಟಿವೆ.

50 ಸಾವಿರಕ್ಕಿಂತ ಅಧಿಕ ಸೋಂಕಿನ ಪ್ರಕರಣಗಳ ಪೈಕಿ ಮುಂಬಯಿಯಲ್ಲಿಯೇ 30 ಸಾವಿರಕ್ಕಿಂತ ಅಧಿಕ ಸೋಂಕುಗಳು ಇವೆ. ಜತೆಗೆ 988 ಮಂದಿ ಅಸುನೀಗಿದ್ದಾರೆ. ಮುಂಬಯಿ ಮೆಟ್ರೋಪಾಲಿಟನ್‌ ಪ್ರದೇಶ ಸೇರಿದಂತೆ ಮುಂಬಯಿಯಲ್ಲಿ ಸೋಂಕಿನ ಸ್ಥಿತಿ ಭಾರೀ ಕಳವಳ ಹುಟ್ಟಿಸುವ ಸ್ಥಿತಿಯಲ್ಲಿದೆ. ಮಹಾರಾಷ್ಟ್ರಾ ದ್ಯಂತ 4,99,387 ಮಂದಿ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿ ಇದ್ದಾರೆ. 35,107 ಮಂದಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇದ್ದಾರೆ.

ಇನ್ನು ಪುಣೆಯಲ್ಲಿ ಸೋಂಕಿನ ಪ್ರಕರಣಗಳ ಸಂಖ್ಯೆ 5 ಸಾವಿರ ದಾಟಿದ್ದರೆ, 251 ಮಂದಿ ಜೀವ ಕಳೆದುಕೊಂಡಿದ್ದಾರೆ. ನಾಸಿಕ್‌ನಲ್ಲಿ 1,570, ಲಾತೂರ್‌ನಲ್ಲಿ 1,570, ಕೊಲ್ಹಾಪುರ ದಲ್ಲಿ 504 ಕೇಸುಗಳು ದೃಢಪಟ್ಟಿವೆ.

ಗುಜರಾತ್‌ನಲ್ಲಿ: ಕೋವಿಡ್ 19 ಮ್ಯಾಪ್‌ನಲ್ಲಿ 2ನೇ ಸ್ಥಾನದಲ್ಲಿರುವ ಗುಜರಾತ್‌ನಲ್ಲಿ 394 ಹೊಸ ಕೇಸ್‌ಗಳು ಪತ್ತೆಯಾಗಿವೆ. ಈ ಪೈಕಿ 279 ಅಹ್ಮದಾಬಾದ್‌ನಲ್ಲಿಯೇ ದೃಢಪಟ್ಟಿವೆ. 29 ಮಂದಿ ಸಾವಿಗೀಡಾಗಿದ್ದರೆ, 28 ಅಹ್ಮದಾ ಬಾದ್‌ನಲ್ಲಿಯೇ ಜೀವ ಕಳೆದುಕೊಂಡಿದ್ದಾರೆ. ತಮಿಳುನಾಡಿನಲ್ಲಿ ಹೊಸದಾಗಿ 765, ರಾಜಸ್ಥಾನದಲ್ಲಿ 152 ಕೇಸುಗಳು ದೃಢಪಟ್ಟಿವೆ.

ಸತತ 3ನೇ ದಿನ: ದೇಶದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗಿದೆ. ಶನಿವಾರದಿಂದ ರವಿವಾರದ ಅವಧಿಯಲ್ಲಿ ದೇಶದಲ್ಲಿ 6,767 ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. ಸತತ ಮೂರನೇ ದಿನ ಸೋಂಕಿನ ಸಂಖ್ಯೆ 6 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ 147 ಮಂದಿ ಅಸುನೀಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಗುಣ ಮುಖರಾಗುವವರ ಸಂಖ್ಯೆ 54,440ಕ್ಕೆ ಏರಿಕೆಯಾಗಿದೆ. ಹೀಗಾಗಿ ಅಂಥವರ ಶೇಕಡವಾರು ಪ್ರಮಾಣ ಕೂಡ 41.28ಕ್ಕೆ ಹೆಚ್ಚಿದೆ.

ವಾಕ್ಸಿನ್‌ನಂತೆ ಕೆಲಸ ಮಾಡಿದೆ:
ಇನ್ನೊಂದೆಡೆ ದೇಶದಲ್ಲಿ ಜಾರಿಗೊಳಿಸಲಾಗಿ ರುವ ಲಾಕ್‌ಡೌನ್‌ ಮತ್ತು ಇತರ ನಿಯಮಗಳು ಸೋಂಕು ತಡೆಯುವಲ್ಲಿ ಕೆಲಸ ಮಾಡಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಹರ್ಷವರ್ಧನ್‌ ತಿಳಿಸಿದ್ದಾರೆ. ಲಾಕ್‌ಡೌನ್‌ಗಿಂತ ಮೊದಲು ಸೋಂಕು ದ್ವಿಗುಣಗೊಳ್ಳುವ ಅವಧಿ 3.4 ದಿನ ಆಗಿತ್ತು. ಈಗ 13 ದಿನಗಳಿಗಿಂತ ಹೆಚ್ಚಾಗಿದೆ ಎಂದರು. ಜಗತ್ತಿನ ಇತರ ದೇಶಗಳಲ್ಲಿ ಸೋಂಕು ಸ್ಥಿತಿ ನಿಯಂತ್ರಣ ಸಾಧ್ಯವೇ ಇಲ್ಲ ಎಂದು ತಿಳಿದಾಗ ಲಾಕ್‌ಡೌನ್‌ ಮಾಡಲು ನಿರ್ಧರಿಸಲಾಯಿತು.

ಸಿದ್ಧಗೊಂಡಿರಬೇಕು: ದೇಶದಲ್ಲಿನ ಆರೋಗ್ಯ ವ್ಯವಸ್ಥೆ ಮತ್ತು ಇತರ ಸಂಬಂಧಿತ ಮೂಲಭೂತ ವ್ಯವಸ್ಥೆಗಳನ್ನು ಮುಂದಿನ ಎರಡು ತಿಂಗಳ ಪರಿಸ್ಥಿತಿ ಗಮನಿಸಿಕೊಂಡು ಮತ್ತಷ್ಟು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು. ಹೀಗೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ತಮಿಳುನಾಡು, ಗುಜರಾತ್‌, ದಿಲ್ಲಿ, ಮಧ್ಯಪ್ರದೇಶ, ಪಶ್ಚಿಮ ಬಂಗಾಲ ಮತ್ತು ರಾಜಸ್ಥಾನ ದೇಶದ ಒಟ್ಟು ಶೇ.70ರಷ್ಟು ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಈ ಸೂಚನೆ ಮಹತ್ವ ಪಡೆದಿದೆ. ಆರು ರಾಜ್ಯಗಳ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಇತರ ಸ್ಥಳಗಳಲ್ಲಿ ನಿಕಟವಾಗಿ ಪರಿಸ್ಥಿತಿ ಗಮನಿಸುವ ನಿಟ್ಟಿನಲ್ಲಿ ವಿಶೇಷ ಗಮನ ನೀಡಬೇಕು ಎಂದಿದೆ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.