![1-dee](https://www.udayavani.com/wp-content/uploads/2025/02/1-dee-1-415x221.jpg)
![1-dee](https://www.udayavani.com/wp-content/uploads/2025/02/1-dee-1-415x221.jpg)
Team Udayavani, May 25, 2020, 4:23 AM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಇದೀಗ ಚಿತ್ರದ ತಂಡ ರಂಜಾನ್ ಹಬ್ಬದ ಪ್ರಯುಕ್ತ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ನಡುವೆಯೇ ಅಭಿಮಾನಿಗಳು ಸಖತ್ ಖುಷಿಯಾಗಿದ್ದು, ಚಿತ್ರ ಕೂಡ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದಾರೆ.
ರಂಜಾನ್ ಹಬ್ಬದ ಪ್ರಯುಕ್ತ ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡುತ್ತೇವೆಂದು ಚಿತ್ರದ ನಿರ್ದೇಶದ ತರುಣ್ ಸುಧೀರ್ ಹೇಳಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಕೂಡ ಖುಷಿಯಾಗಿದ್ದು, ಆಗಲೇ ಸೋಶಿಯಲ್ ಮೀಡಿಯಾಗಳಲ್ಲಿ ಈ ವಿಷಯವನ್ನು ಶೇರ್ ಮಾಡುತ್ತಿದ್ದಾರೆ. ರಾಬರ್ಟ್ ಚಿತ್ರ ಭಾರೀ ನಿರೀಕ್ಷೆಗಳನ್ನು ಮೂಡಿಸಿದ್ದು, ಈಗಾಗಲೇ ಚಿತ್ರತಂಡ ಪ್ರತೀ ಹಬ್ಬದ ಸಂಭ್ರಮಗಳಿಗೆ ವಿಶೇಷ ಉಡುಗೊರೆಯನ್ನು ನೀಡುತ್ತಲೇ ಬಂದಿದೆ.
ಕ್ರಿಸ್ ಮಸ್, ಸಂಕ್ರಾಂತಿ, ಯುಗಾದಿ, ಶ್ರೀರಾಮನವಮಿ, ಕಾರ್ಮಿಕರ ದಿನ ಹೀಗೆ ಒಂದೊಂದು ದಿನ ಚಿತ್ರದ ಕುರಿತ ಒಂದೊಂದು ಅಂಶಗಳನ್ನು ಚಿತ್ರತಂಡ ತಿಳಿಸಿದೆ. ಪೋಸ್ಟರ್, ಮೋಷನ್ ಮೋಸ್ಟರ್, ಫಸ್ಟ್ ಲುಕ್, ಟೀಸರ್, ಮೇಕಿಂಗ್ ವಿಡಿಯೋಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅಭಿಮಾನಿಗಳಲ್ಲಿ ಕುತೂಹಲವನ್ನು ಹೆಚ್ಚು ಮಾಡುವಲ್ಲಿ ಯಶಸ್ವಿಯಾಗಿದೆ. ಇದೀಗ ರಾಬರ್ಟ್ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿರುವುದು ಅಭಿಮಾನಿಗಳಲ್ಲಿನ ಕಾತರವನ್ನು ಮತ್ತಷ್ಟು ಹೆಚ್ಚು ಮಾಡಿದಂತಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.