“25 ಲಕ್ಷ ರೂ. ವೆಚ್ಚದಲ್ಲಿ ಜಪ್ಪಿನಮೊಗರು ಕೆರೆ ಅಭಿವೃದ್ಧಿ’
Team Udayavani, May 25, 2020, 9:57 AM IST
ಕಂರ್ಬಿಸ್ಥಾನ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ನೀಡಿದರು.
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಜಪ್ಪಿನಮೊಗರು ವಾರ್ಡಿನ ಕಂರ್ಬಿಸ್ಥಾನ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಕಾಮತ್, ಜಪ್ಪಿನಮೊಗರು ವಾರ್ಡಿನ ಪಾಲಿಕೆ ಸದಸ್ಯರ ಹಾಗೂ ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿದ್ದ ಕಂರ್ಬಿಸ್ಥಾನ ಕ್ಷೇತ್ರ ಪರಿಸರದ ಕೆರೆಯ ಪುನರುಜ್ಜೀವನಕ್ಕೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಥಮ ಹಂತದ 25 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಈ ಕೆರೆಯನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಕೆಲವೊಂದು ಕೆರೆಗಳ ಅಭಿವೃದ್ಧಿ ಕಾಮಗಾರಿ ಈಗಾಗಲೇ ಪ್ರಾರಂಭಗೊಂಡಿದೆ. ನಗರ ವ್ಯಾಪ್ತಿಯ ಕೆರೆಗಳನ್ನು ಜನರಿಗೆ ಉಪಯೋಗ ಯೋಗ್ಯವಾಗುವಂತೆ ಅಭಿವೃದ್ಧಿ ಪಡಿಸಿ ಸಂರಕ್ಷಿಸುವ ಯೋಜನೆ ಯಿದೆ. ನಗರ ಬೆಳೆಯುವ ಕಾಲ ಘಟ್ಟದಲ್ಲಿ ಕುಡಿಯುವ ನೀರಿನ ಮೂಲ ಗಳನ್ನೂ ಅಭಿವೃದ್ಧಿಪಡಿಸುವುದೂ ಮಹತ್ವ ಪೂರ್ಣ ವಾದದ್ದು ಎಂದು ಶಾಸಕರು ಹೇಳಿದರು.
ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಪಾಲಿಕೆ ಸದಸ್ಯೆ ವೀಣಾ ಮಂಗಳ, ಮಂಗಳೂರು ನಗರಾ ಭಿವೃದ್ಧಿ ಪ್ರಾಧಿಕಾರ ಆಯುಕ್ತ ದಿನೇಶ್ ಕುಮಾರ್, ಬಿಜೆಪಿ ಮುಖಂಡರಾದ ಪುಷ್ಪರಾಜ್, ಸಂದೇಶ್, ಪ್ರಾಣೇಶ್, ಪ್ರವೀಣ್ ಕುಮಾರ್, ನಿತೇಶ್, ಸಂಜಯ್, ವಿಶ್ವನಾಥ್ ಆಳ್ವ, ದೀಕ್ಷಿತ್, ಚಿತ್ತರಂಜನ್, ಮನೋಜ್, ಗಣೇಶ್ ಸಾಲ್ಯಾನ್, ಗಣೇಶ್ ಶೆಟ್ಟಿ, ಗಣೇಶ್ ಗುಡ್ಡೆಗುತ್ತು, ಭುಜಂಗ ಶೆಟ್ಟಿ, ಅನಿಲ್ ಮಂಕುತೋಟ, ಸಂತೋಷ್ ಆಳ್ವ, ಆರತಿ ಶೇಟ್ ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.