ವಿಶೇಷ ವರದಿ: ಕೊಡಿಯಾಲ್‌ಗ‌ುತ್ತು ಕ್ರಾಸ್‌: ಸಮಸ್ಯೆ ತಪ್ಪಿದ್ದಲ್ಲ

ವರ್ಷದೊಳಗೆ ಒಂದೇ ರಸ್ತೆ ನಾಲ್ಕು ಬಾರಿ ಅಗೆತ !

Team Udayavani, May 25, 2020, 10:03 AM IST

ಕೊಡಿಯಾಲ್‌ಗ‌ುತ್ತು ಕ್ರಾಸ್‌: ಸಮಸ್ಯೆ ತಪ್ಪಿದ್ದಲ್ಲ

ಮಂಗಳೂರು: ಮಂಗಳೂರು ನಗರದ ಜೈಲು ರಸ್ತೆಯಿಂದ ಬಿಜೈಗೆ ಸಂಪರ್ಕ ಕಲ್ಪಿಸುವ ಕೊಡಿಯಾಲ್‌ಗ‌ುತ್ತು ಕ್ರಾಸ್‌ ರಸ್ತೆ ಅಕ್ಕ-ಪಕ್ಕದಲ್ಲೇ ಕಳೆದ ಒಂದು ವರ್ಷಗಳಿಂದ ನಾಲ್ಕು ಬಾರಿ ಕಾಮಗಾರಿಯ ನೆಪದಲ್ಲಿ ಅಗೆಯಲಾಗಿದೆ. ಜತೆಗೆ ಸಮಸ್ಯೆಗಳು ಪುನರಾವರ್ತನೆಯಾಗುತ್ತಲೇ ಇವೆ.

ಸ್ಥಳೀಯರಿಗೆ ಕಿರಿಕಿರಿ
ಲಕ್ಷಾಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡುವುದರೊಂದಿಗೆ ರಸ್ತೆಯಲ್ಲಿ ಸಾಗುವ ಸ್ಥಳೀಯರಿಗೆ, ವಾಹನ ಸವಾರರಿಗೆ ಅಡ್ಡಿಯುಂಟಾಗುತ್ತಿದೆ. ಈ ಜಾಗದಲ್ಲಿ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಹುಡುಕುವ ಪ್ರಯತ್ನವನ್ನು ಪಾಲಿಕೆ ಮಾಡಿಲ್ಲ ಎನ್ನುವುದು ಆರೋಪ.

ಕೃತಕ ನೆರೆ
ಜೋರಾಗಿ ಮಳೆ ಬಂದರೆ ಈ ಪ್ರದೇಶದ ಸುತ್ತಮುತ್ತಲಿನ ಮನೆಗೆ ಕೃತಕ ನೆರೆ ಉಂಟಾಗುತ್ತದೆ. ಮಳೆ ನೀರು ಹರಿಯುವ ಚರಂಡಿ ವ್ಯವಸ್ಥೆ ಸಮರ್ಪಕವಾಗಿರದ ಕಾರಣ, ಮಳೆ ನೀರು ರಾಜಕಾಲುವೆಯನ್ನು ಸೇರುತ್ತಿಲ್ಲ. ಬದಲಾಗಿ ರಸ್ತೆಯಲ್ಲಿಯೇ ಹರಿದು ಅಕ್ಕ-ಪಕ್ಕದ ಫ್ಲಾಟ್‌, ಮನೆಗಳಿಗೆ ನುಗ್ಗುತ್ತಿದೆ. ಕಳೆದ ವರ್ಷ ಕೂಡ ಇದೇ ರೀತಿಯ ಸಮಸ್ಯೆ ಉಂಟಾಗಿ ರಸ್ತೆ ಅಗೆದು ಕಾಮಗಾರಿ ನಡೆಸಲಾಗಿತ್ತು. ಇದೀಗ ಶನಿವಾರದಿಂದ ಮತ್ತೂಮ್ಮೆ ರಸ್ತೆ ಅಗೆಯುವ ಕೆಲಸದಲ್ಲಿ ಪಾಲಿಕೆ ತೊಡಗಿಸಿಕೊಂಡಿದೆ.

ಹಲವು ಬಾರಿ ಕೆಲಸ
ಈ ರಸ್ತೆಯಲ್ಲಿ ಹಾದು ಹೋಗುವ ನೀರಿನ ಪೈಪ್‌ಲೈನ್‌ ಕೆಲ ತಿಂಗಳ ಹಿಂದೆ ಕೆಟ್ಟಿತ್ತು. ಇದೇ ಕಾಮಗಾರಿಗೆ ಡ್ರಿಲ್ಲಿಂಗ್‌ ಮಷೀನ್‌ ಮುಖೇನ ರಸ್ತೆ ಅಗೆಯಲಾಗಿತ್ತು. ಈ ಕಾಮಗಾರಿ ನಡೆಯುತ್ತಿರುವ ಕೂಗಳತೆ ದೂರದಲ್ಲಿ ಒಳಚರಂಡಿ ಕಾಮಗಾರಿಗೆಂದು ಸುಮಾರು 5 ಅಡಿಯಷ್ಟು ಆಳ ರಸ್ತೆ ಅಗೆಯಲಾಗಿತ್ತು. ಭಾರೀ ಮಳೆಯಿಂದಾಗಿ ಈ ಭಾಗದ ಒಳಚರಂಡಿ ಪೈಪ್‌ಲೈನ್‌ನ ಹತ್ತು ಅಡಿ ಆಳದಲ್ಲಿ ದೊಡ್ಡ ಗಾತ್ರದ ಕಲ್ಲು ಸಿಲುಕಿ ಹಾಕಿಕೊಂಡಿದ್ದರಿಂದ ನೀರು ಹರಿಯುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಸುಮಾರು ಎರಡು ವಾರಗಳ ಬಳಿಕ ಕಾಮಗಾರಿ ಪೂರ್ಣಗೊಂಡಿತ್ತು.

ಈ ಕಾಮಗಾರಿ ಪೂರ್ಣಗೊಂಡ ಕೆಲವು ದಿನಗಳಲ್ಲೇ ಒಳಚರಂಡಿ ನೀರು ರಸ್ತೆಗೆ ಹರಿಯುತ್ತಿದೆ ಎಂಬ ಕಾರಣಕ್ಕೆ ಪಿಂಟೋ ಬೇಕರಿ ಸಮೀಪ ರಸ್ತೆ ಅಗೆಯಲಾಗಿತ್ತು.
ಬಳಿಕ ಪಕ್ಕದ ಮ್ಯಾನ್‌ಹೋಲ್‌ಗೆ ಪೈಪ್‌ಲೈನ್‌ ಸಂಪರ್ಕ ನೀಡಲಾಯಿತು. ಈವರೆಗೆ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ.

 ಪರಿಹಾರ
ಕಳೆದ ಮಳೆಗಾಲದಲ್ಲಿ ಚರಂಡಿಯಲ್ಲಿ ನೀರು ಹರಿಯದೆ ಸುತ್ತಮುತ್ತಲಿನ ಮನೆಗಳಿಗೆ ನುಗ್ಗಿತ್ತು. ಅದೇ ಕಾರಣಕ್ಕೆ ಚರಂಡಿ ಕಾಮಗಾರಿ ಶನಿವಾರ ಆರಂಭಗೊಂಡಿದ್ದು, ಎರಡು ವಾರದಲ್ಲಿ ಪೂರ್ಣಗೊಳ್ಳಲಿದೆ. ಕಳೆದ ಬಾರಿ ಮಾಡಿದ್ದ ಕಾಮಗಾರಿ ಸಮರ್ಪಕವಾಗಿಲ್ಲ. ಇದೇ ಕಾರಣಕ್ಕೆ ಆ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಿಲ್ಲ. ಈ ಬಾರಿ ಖಂಡಿತವಾಗಿಯೂ ಸಮಸ್ಯೆಗೆ ಪರಿಹಾರ ಸಿಗುತ್ತದೆ.
 -ಯಶವಂತ್‌, ಸ್ಥಳೀಯ ಕಾರ್ಪೊರೇಟರ್‌.

 ದೂರಿನ ಹಿನ್ನೆಲೆ
ಕೊಡಿಯಾಲ್‌ಗ‌ುತ್ತು ಕ್ರಾಸ್‌ ಬಳಿ ನೀರು ಹರಿಯುವ ತೋಡಿಗೆ ಚರಂಡಿ ಸಂಪರ್ಕ ಕಲ್ಪಿಸಲಾಗುತ್ತಿದೆ. ವಿವಿಧ ಕಡೆಗಳಿಂದ ಹರಿದು ಬಂದ ಮಳೆ ನೀರು ಚರಂಡಿ ಸೇರದೆ ಕೃತಕ ನೆರೆ ಬರುತ್ತಿತ್ತು. ಮನೆ ಮಂದಿ ಈ ಬಗ್ಗೆ ದೂರು ನೀಡಿದ್ದು, ಕಾಮಗಾರಿ ಆರಂಭಿಸಲಾಗಿದೆ. ಈ ಹಿಂದೆ ನಡೆದ ಕಾಮಗಾರಿ ಬಗ್ಗೆ ಇಂಜಿನಿಯರ್‌ ಅವರೇ ಉತ್ತರಿಸಬೇಕು.
 -ಸುಧೀರ್‌ ಶೆಟ್ಟಿ ಕಣ್ಣೂರು ಸ್ಥಳೀಯ ಕಾರ್ಪೊರೇಟರ್‌.

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.