ಮೂರು ತಿಂಗಳ ಹಿಂದಿನ ಹಳೇ ವಿಡಿಯೋ ವೈರಲ್: ಉಡುಪಿ ಜಿಲ್ಲಾಧಿಕಾರಿ ಸ್ಪಷ್ಟನೆ
Team Udayavani, May 25, 2020, 10:28 PM IST
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ಮಧ್ಯರಾತ್ರಿಯಿಂದ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಹೇಳಿರುವ ವಿಡಿಯೋ ಒಂದು ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
ಆದರೆ ಇದು, ಮೂರು ತಿಂಗಳ ಹಿಂದೆ ಮಾ.22ರ ಲಾಕ್ ಡೌನ್ ಘೋಷಣೆಯಾಗಿದ್ದ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಯವರು ಜಿಲ್ಲೆಯ ಜನತೆಗೆ ನೀಡಿದ ವಿಡಿಯೋ ಸಂದೇಶವಾಗಿತ್ತು.
ಇದೀಗ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿರುವ ಸಂದರ್ಭದಲ್ಲಿ ಜನತೆಯಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಕೆಲವು ಕಿಡಿಗೇಡಿಗಳು ಈ ಹಳೆಯ ವಿಡಿಯೋ ಸಂದೇಶವನ್ನೇ ಜಿಲ್ಲಾಧಿಕಾರಿಯವರ ಹೊಸ ವಿಡಿಯೋ ಸಂದೇಶವೆಂದು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕಟ್ಟುನಿಟ್ಟಿನ ಲಾಕ್ಡೌನ್ ಇಲ್ಲ, ಮೇ 31ರ ವರೆಗೆ ಲಾಕ್ಡೌನ್ 4ರ ನಿಯಮಾವಳಿ ಜಾರಿಯಲ್ಲಿರಲಿದೆ ಈ ಕುರಿತಾಗಿ ಸಾರ್ವಜನಿಕರು ಆತಂಕ ಪಡುವ ಆವಶ್ಯಕತೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!
Karkala: ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.