ದೆಹಲಿಯ ತುಘಲಕ್ ಬಾದ್ ಕೊಳಗೇರಿಯಲ್ಲಿ ಭಾರೀ ಅಗ್ನಿ ದುರಂತ: 1,200 ಗುಡಿಸಲುಗಳಿಗೆ ಬೆಂಕಿ
Team Udayavani, May 26, 2020, 8:00 AM IST
ನವದೆಹಲಿ: ಇಲ್ಲಿನ ತುಘಲಕ್ ಬಾದ್ ಕೊಳಗೇರಿಯಲ್ಲಿ ಮಂಗಳವಾರ ಬೆಳಗ್ಗೆ 1 ಗಂಟೆ ಸುಮಾರಿಗೆ ಭಾರೀ ಪ್ರಮಾಣದ ಅಗ್ನಿ ಅನಾಹುತ ಸಂಭವಿಸಿದೆ.
ತುಘಲಕ್ ಬಾದ್ ಸ್ಲಂ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸುಮಾರು 1 ಗಂಟೆಗೆ ಕರೆ ಬಂದವು. ಕೂಡಲೇ ಎಲ್ಲಾ ಪೊಲೀಸ್ ಸಿಬ್ಬಂದಿಗಳು, ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದರು. ಅದಾಗಲೇ 1000-1200 ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡಿದ್ದವು ಎಂದು ಉಪಪೊಲೀಸ್ ಆಯುಕ್ತ ರಾಜೇಂದ್ರ ಪ್ರಸಾದ್ ಮೀನಾ ತಿಳೀಸಿದ್ದಾರೆ.
ಬೆಂಕಿ ದುರಂತ ಸಂಭವಿಸಿದ ತಕ್ಷಣ ಗುಡಿಸಲುಗಳಲ್ಲಿ ಮಲಗಿದ್ದವರು ಹೊರಕ್ಕೆ ಓಡಿ ಬಂದಿದ್ದಾರೆ. ಇಲ್ಲದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಗಳಿದ್ದವು. ಆದರೆ ಈ ಅವಘಡಕ್ಕೆ ಕಾರಣಗಳೇನು ಎಂಬುದು ತಿಳಿದುಬಂದಿಲ್ಲ.
ಸ್ಥಳದಲ್ಲಿ 30 ಅಗ್ನಿಶಾಮಕ ವಾಹನಗಳಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆಸಿವೆ. ಬೆಂಕಿಯಿಂದ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಮಾತ್ರವಲ್ಲದೆ ಅವಘಡದಲ್ಲಿ ಹಾನಿಗೊಳಗಾದ ಆಸ್ತಿಯ ಮೌಲ್ಗಯವನ್ನು ಅಂದಾಜಿಸಲಾಗಿಲ್ಲಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.