ಉಡುಪಿಯಲ್ಲಿ ಇಂದು ಮೂವರಲ್ಲಿ ಕೋವಿಡ್ ಸೋಂಕು ದೃಢ
Team Udayavani, May 26, 2020, 12:59 PM IST
ಉಡುಪಿ: ಜಿಲ್ಲೆಯಿಂದ ತಿಂಗಳ ಕಾಲ ದೂರವಿದ್ದ ಕೋವಿಡ್-19 ಸೋಂಕು ಸದ್ಯ ಪ್ರತಿದಿನವೂ ಆಘಾತ ನೀಡುತ್ತಿದೆ. ಸೋಮವಾರ ಹೊಸ 32 ಸೋಂಕು ಪ್ರಕರಣಗಳ ಮೂಲಕ ಶತಕದ ಗಡಿ ದಾಟಿದ್ದ ಉಡುಪಿಯಲ್ಲಿ ಇಂದು ಮತ್ತೆ 3 ಹೊಸ ಪ್ರಕರಣಗಳು ದೃಢವಾಗಿದೆ.
ಸೋಂಕಿತರು ಮಹಾರಾಷ್ಟ್ರದಿಂದ ಬಂದಿದ್ದು ಅವರಲ್ಲಿ 9 ವರ್ಷದ ಮಗು ಸೇರಿ 27 ವರ್ಷದ ಪುರುಷ , 30 ವರ್ಷದ ಮಹಿಳೆ ಯಲ್ಲಿ ಸೋಂಕು ತಗುಲಿದು ಎಲ್ಲರು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಈ ತಿಂಗಳ ಆರಂಭದವರೆಗೂ ಕೇವಲ ಮೂರು ಸೋಂಕು ಪ್ರಕರಣಗಳನ್ನು ಹೊಂದಿದ್ದ ಉಡುಪಿ ಜಿಲ್ಲೆಯಲ್ಲಿ ಸದ್ಯ ಸೋಂಕಿತರ ಸಂಖ್ಯೆ ಅಪಾಯಕಾರಿ ಮಟ್ಟದಲ್ಲಿ ಏರಿಕೆ ಕಾಣುತ್ತಿದೆ. ಸೋಮವಾರ ಒಂದೇ ದಿನ 32 ಹೊಸ ಸೋಂಕು ಪ್ರಕರಣಗಳು ಕಂಡು ಬಂದಿದ್ದವು.
ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕಂಡು ಬರುತ್ತಿರುವ ಹೆಚ್ಚಿನ ಪ್ರಕರಣಗಳು ಮಹಾರಾಷ್ಟ್ರದಿಂದ ಆಗಮಿಸುತ್ತಿರುವವರಿಂದ ಆಗುತ್ತಿದೆ. ಅದರಲ್ಲೂ ಹತ್ತು ವರ್ಷಕ್ಕಿಂತ ಸಣ್ಣ ಪ್ರಾಯದ ಮಕ್ಕಳಿಗೆ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.