ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನೋರ್ವನಿಗೆ ಕೋವಿಡ್-19 ಸೋಂಕು ದೃಢ
Team Udayavani, May 26, 2020, 12:51 PM IST
ಬೆಂಗಳೂರು: ಮಾಗಡಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಾಲಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದರಿಂದ ಅವರ ಜೊತೆಗೆ ಪ್ರಯಾಣಿಸಿದವರನ್ನ ತಪಾಸಣೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.
ರೆಡ್ ಝೋನ್ ಹಾಗೂ ಕಂಟೋನ್ಮೆಂಟ್ ಝೋನ್ ನಿಂದ ಬಂದು ಕೆಲಸ ಮಾಡುತ್ತಿರುವವರಿಗೂ ಜೊತೆಗೆ ಅವರ ಸಂಪರ್ಕದಲ್ಲಿ ಇರುವವರಿಗೂ ಟೆಸ್ಟ್ ಮಾಡಿಸುತ್ತೇವೆ. ರಾಜ್ಯಾದ್ಯಂತ ಕೋವಿಡ್-19 ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದರು.
ಆಯುಷ್ ವೈದ್ಯರ ಪ್ರತಿಭಟನೆ ವಿಚಾರ,ಅವರ ಸಮಸ್ಯೆಗಳ ಸಂಬಂಧಪಟ್ಟಂತೆ ಈಗ ಸಭೆ ನಡೆಸಲಾಗುತ್ತಿದೆ. ಆಯುಷ್ ವೈದ್ಯರು ನನ್ನ ಮುಂದೆ ಹಲವು ಬೇಡಿಕೆಗಳನ್ನ ಇಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಈ ಸಮಸ್ಯೆಗಳು ಹಾಗೇ ಇವೆ. ಎಂಬಿಬಿಎಸ್ ವೈದ್ಯರ ಸಮನಾಗಿ ಆಯುಷ್ ವೈದ್ಯರು ವೇತನ ಕೇಳಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಒಂದು ಸಮಿತಿ ಮಾಡುತ್ತೇವೆ. ಆ ಸಮಿತಿ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.