ಬೀದರ್ ನಲ್ಲಿ 10, ದಾವಣಗೆರೆಯಲ್ಲಿ 11 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆ
Team Udayavani, May 26, 2020, 2:07 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್/ದಾವಣಗೆರೆ: ಮಹಾರಾಷ್ಟ್ರ ಕಂಟಕದಿಂದಾಗಿ ಗಡಿ ಜಿಲ್ಲೆ ಬೀದರ್ ನಲ್ಲಿ ಕೋವಿಡ್ ಸೋಂಕು ಮತ್ತೆ ಆರ್ಭಟಿಸಿದೆ.
ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 10 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಮತ್ತು ಇವರೆಲ್ಲರಿಗೂ ಮಹಾರಾಷ್ಟ್ರ ನಂಟು ಇರುವುದು ಜಿಲ್ಲೆಯ ಜನರ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಈಗ 95ಕ್ಕೆ ಏರಿಕೆಯಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಬ್ಬರು ಮೃತಪಟ್ಟಿದ್ದು 21 ಜನರು ಗುಣಮುಖರಾಗಿ ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ.
ಸೋಮವಾರ ಕೊಂಚ ಇಳಿಮುಖವಾಗಿದ್ದ ಕೋವಿಡ್ ವೈರಾಣು ಸೋಂಕಿನ ಹೊಸ ಪ್ರಕರಣಗಳು ಇಂದು ಮತ್ತೆ ಸ್ಪೋಟಗೊಂಡಿದೆ. ಇಂದು ಪಾಸಿಟಿವ್ ಪತ್ತೆಯಾದ ಎಲ್ಲಾ ಸೋಂಕಿತರು ಬಸವಕಲ್ಯಾಣ ತಾಲೂಕಿನ ಗ್ರಾಮದವರು ಎಂಬ ಮಾಹಿತಿ ಲಭ್ಯವಾಗಿದ್ದು ಇವರೆಲ್ಲರಿಗೂ ಮಹಾರಾಷ್ಟ್ರದ ಸಂಪರ್ಕ ಇತ್ತು ಎಂದೂ ತಿಳಿದು ಬಂದಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ ಮೂವರು ಮಹಿಳೆಯರು ಹಾಗೂ ಏಳು ಜನ ಪುರುಷರು ಸೇರಿದ್ದಾರೆ.
ಜಿಲ್ಲೆಯಲ್ಲಿ ಇಂದು ಪತ್ತೆಯಾದ ಕೋವಿಡ್ ಸೋಂಕಿತರ ವಿವರ:
55 ವರ್ಷದ ಮಹಿಳೆ (ಪಿ-2209), 28 ವರ್ಷದ ಯುವತಿ (ಪಿ-2210), 58 ವರ್ಷದ ವ್ಯಕ್ತಿ (ಪಿ-2211), 43 ವರ್ಷದ ವ್ಯಕ್ತಿ (ಪಿ-2012), 23 ವರ್ಷದ ಯುವಕ (ಪಿ-2213), 42 ವರ್ಷದ ಮಹಿಳೆ (ಪಿ-2214), 34 ವರ್ಷದ ಮಹಿಳೆ (ಪಿ- 2215), 43 ವರ್ಷದ ವ್ಯಕ್ತಿ (ಪಿ-2216), 37 ವರ್ಷದ ಮಹಿಳೆ (ಪಿ- 2217) ಮತ್ತು 16 ವರ್ಷದ ಯುವಕ (ಪಿ-2218)
ದಾವಣಗೆರೆ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಇಳಿಮುಖವಾಗಿದ್ದ ಕೋವಿಡ್ ಸೋಂಕಿತರ ಸಂಖ್ಯೆ ಮಂಗಳವಾರ ಏಕಾಏಕಿ ಏರಿಕೆ ಆಗಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ 11 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.
ಇದರಿಂದಾಗಿ ಜಿಲ್ಲೆಯಲ್ಲಿ ಈವರೆಗೂ ಕೋವಿಡ್ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 136ಕ್ಕೇರಿದಂತಾಗಿದೆ. ಇವರಲ್ಲಿ 50 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ ಹಾಗೂ ಸದ್ಯಕ್ಕೆ 82 ಸೋಂಕುಪೀಡಿತರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.