ಕೋವಿಡ್ ಮುನ್ನೆಚ್ಚರಿಕೆ ವಹಿಸಲು ಕಾರ್ಮಿಕರಿಗೆ ಸಲಹೆ
Team Udayavani, May 26, 2020, 5:12 PM IST
ಕಲಬುರಗಿ: ತಾಲೂಕಿನ ಹೊನ್ನ ಕಿರಣಗಿಯಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಡಾ| ಉಮೇಶ ಜಾಧವ ಕಾರ್ಮಿಕರಿಗೆ ಮಾಸ್ಕ್ ವಿತರಿಸಿ, ಕೋವಿಡ್ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.
ಹೊನ್ನಕಿರಣಗಿ ಗ್ರಾ.ಪಂನಲ್ಲಿ 500 ಜನ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದು, ಸ್ಥಳದಲ್ಲಿ 130 ಜನ ಕ್ಷೇತ್ರಬದು ನಿರ್ಮಾಣದಲ್ಲಿ ತೊಡಗಿದ್ದಾರೆ ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇನಕಾ ಜಾಧವ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರು ಮಾತನಾಡಿ, ಕೋವಿಡ್-19 ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ 10 ಕಿ.ಲೋ ಅಕ್ಕಿ ವಿತರಿಸುವಂತೆ ಸಂಸದರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ಈ ಕುರಿತು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.
ಜೊತೆಗೆ ಕೂಲಿ ಕಾರ್ಮಿಕರಿಗೆ ಸ್ಥಳದಲ್ಲಿಯೇ ಅನ್ನ, ಬೇಳೆ ಮುಂತಾದ ಪೌಷ್ಟಿಕತೆಯುಳ್ಳ ಊಟ ನೀಡುವಂತೆಯೂ ಪಿಡಿಒಗೆ ಸೂಚಿಸಿದರು. ನಂತರ ಈ ಕುರಿತು ತಹಶೀಲ್ದಾರ್ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗೆ ಕುಡಿಯಲು ಟ್ಯಾಂಕರ್‌ನಿಂದ ನೀರು ಸರಬರಾಜು ಮಾಡುತ್ತಿರುವುದನ್ನು ಗಮನಿಸಿದ ಸಂಸದರು ನಿತ್ಯ ತಣ್ಣನೆಯ, ಶುದ್ಧ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು.
ಕಲಬುರಗಿ ತಾಲೂಕು ಪಂಚಾಯತಿ ಅಧ್ಯಕ್ಷ ಶಿವರಾಜ ಸಜ್ಜನ್, ಹೊನ್ನ ಕಿರಣಗಿ ಗ್ರಾ.ಪಂ ಅಧ್ಯಕ್ಷೆ ಜಗದೇವಿ ಗುರು ಜುಲಿ , ತಾ.ಪಂ ಇಒ ಮಾನಪ್ಪ ಕಟ್ಟಿಮನಿ, ಗ್ರಾ.ಪಂ. ಸದಸ್ಯರಾದ ಪ್ರಕಾಶ ಖಾಬಾ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.