ಒಂದು ಕುಟುಂಬಕ್ಕೆ ನೂರು ದಿನ ಉದ್ಯೋಗ ಖಾತ್ರಿ
Team Udayavani, May 26, 2020, 5:18 PM IST
ಯಾದಗಿರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಕೂಲಿಕಾರರ ಒಂದು ಕುಟುಂಬಕ್ಕೆ 100 ದಿನಗಳ ಕೂಲಿ ಕೆಲಸ ನೀಡಲಾಗುತ್ತಿದೆ. ಯೋಜನೆಯಡಿ ಕೆಲಸ ಮಾಡುವಪ್ರತಿಯೊಬ್ಬ ಕೂಲಿಕಾರರಿಗೆ ದಿನಕ್ಕೆ 275 ರೂ. ಕೂಲಿ ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್-19 ಸಂದರ್ಭದಲ್ಲಿ ಮನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿ ಸ್ಥಳಗಳಲ್ಲಿ ಕೂಲಿಕಾರರಿಗೆ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸೆ ವ್ಯವಸ್ಥೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕೆಲಸ ಮಾಡಿಸಲಾಗುತ್ತಿದೆ. ಕೂಲಿಕಾರರಿಗೆ ಆಯಾ ಗ್ರಾಮ ಪಂಚಾಯತಿಗಳಿಂದ ಮಾಸ್ಕ್ಗಳನ್ನು ಒದಗಿಸಲಾಗುತ್ತಿದೆ ಮತ್ತು ಸ್ಯಾನಿಟೈಸರ್ ಸಿಂಪಡಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ. ಕೂಲಿಕಾರರು ತಾವು ತರುವ ಗುದ್ದಲಿ, ಹಾರೆ ಮುಂತಾದ ಸಲಕರಣೆಗಳನ್ನು ಹರಿತಗೊಳಿಸಲು ದಿನಗೂಲಿ ಜೊತೆಗೆ ಸಲಕರಣೆ ಹರಿತಗೊಳಿಸುವ ವೆಚ್ಚವಾಗಿ ಪ್ರತಿದಿನ 10 ರೂ.ನಂತೆ ಪಾವತಿಸಲಾಗುವುದು. ಕೂಲಿಕಾರರಿಗೆ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೇ ಕೆಲಸ ಕೊಡಲು ಆದ್ಯತೆ ನೀಡಲಾಗುತ್ತಿದೆ. ಒಂದು ವೇಳೆ ಅವರ ಗ್ರಾಮದಲ್ಲಿ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಡಿ ಕೆಲಸ ಸಿಗದಿದ್ದರೆ ಕೂಲಿಕಾರರನ್ನು 5 ಕಿ.ಮೀ.ಗಿಂತಲೂ ಹೆಚ್ಚಿನ ದೂರದ ಸ್ಥಳಗಳಲ್ಲಿ ಕೆಲಸಕ್ಕೆ ನಿಯೋಜಿಸಿದರೆ ಕೂಲಿಯ ಮೊತ್ತದ ಶೇಕಡಾ 10 ರಷ್ಟು ಪ್ರಯಾಣ ಮತ್ತು ಪ್ರಾಸಂಗಿಕ ವೆಚ್ಚವನ್ನು ಪಾವತಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.