ಅಭಿಷೇಕ್ ಚಿತ್ರಕ್ಕೆ ದುನಿಯಾ ಸೂರಿ ನಿರ್ದೇಶನ?
Team Udayavani, May 27, 2020, 4:08 AM IST
ಇತ್ತೀಚೆಗಷ್ಟೇ ಪಾಪ್ ಕಾರ್ನ್ ಮಂಕಿ ಟೈಗರ್ ನಿರ್ದೇಶಿಸಿದ್ದ ದುನಿಯಾ ಸೂರಿ ಲಾಕ್ ಡೌನ್ ವೇಳೆ ಮತ್ತೂಂದು ಹೊಸಚಿತ್ರ ಮಾಡುವ ಸಿದ್ದತೆಯಲ್ಲಿದ್ದಾರೆ. ಅಂದಹಾಗೆ, ಈ ಚಿತ್ರವೊಂದರಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಸದ್ಯ ಗಾಂಧಿನಗರದಲ್ಲಿ ಜೋರಾಗಿ ಹರಿದಾಡುತ್ತಿದೆ.
ಕಳೆದ ವರ್ಷ ಮೇ ತಿಂಗಳಿನಲ್ಲಿ ಅಮರ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದ ಅಭಿಷೇಕ್ ಅಂಬರೀಶ್ ತನ್ನ ಮುಂದಿನ ಚಿತ್ರಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದು, ಈ ಸಂಬಂಧ ಈಗಾಗಲೇ ಒಂದೆರಡು ನಿರ್ದೇಶಕರೊಂದಿಗೆ ಅಭಿಷೇಕ್ ಮಾತುಕತೆ ನಡೆಸಿದ್ದಾರೆ. ಈ ಲಾಕ್ಡೌನ್ ಅವಧಿಯಲ್ಲಿ ಅವರು ತನಗೆ ಬೇಕಾದ ಕಥೆಯ ಆಯ್ಕೆಗೆ ಬಳಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದ್ದರೂ, ಈ ಬಗ್ಗೆ ಅಭಿಷೇಕ್ ಇಲ್ಲಿಯವರೆಗೆ ಯಾವ ಗುಟ್ಟನ್ನೂ ಬಿಟ್ಟುಕೊಟ್ಟಿಲ್ಲ.
ಇನ್ನು ದುನಿಯಾ ಖ್ಯಾತಿಯ ನಿರ್ದೇಶಕ ಸೂರಿ ಅವರೊಂದಿಗೆ ತಮ್ಮ ಮುಂದಿನ ಚಿತ್ರ ಮಾಡುವುದರ ಬಗ್ಗೆ ನಟ ಅಭಿಷೇಕ್ ಮತ್ತು ನಿರ್ದೇಶಕ ಸೂರಿ ಚಿತ್ರಕಥೆಯ ಬಗ್ಗೆ ಪರಸ್ಪರ ಚರ್ಚಿಸಿದ್ದಾರೆ. ಲಾಕ್ ಡೌನ್ ಸಡಿಲವಾದ ಬಳಿಕ ಅಭಿಷೇಕ್ ನಿವಾಸದಲ್ಲಿ ಇಬ್ಬರೂ ಇತ್ತೀಚೆಗೆ ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ದುನಿಯಾ ಸೂರಿ ಮತ್ತು ಅಭಿಷೇಕ್ ಅಂಬರೀಶ್ ಹೊಸಚಿತ್ರದ ಬಗ್ಗೆ ಒಂದಷ್ಟು ನಿರೀಕ್ಷೆಗಳು ಗರಿಗೆದರಿದ್ದು, ಈ ವಿಷಯ ಕಥೆ ಎಷ್ಟರ ಮಟ್ಟಿಗೆ ನಿಜವಾಗಲಿದೆ ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.