ಜಲ ಸಂರಕ್ಷಣೆ, ಅರಣ್ಯೀಕರಣಕ್ಕೆ ಆದ್ಯತೆ ನೀಡಿ

Team Udayavani, May 27, 2020, 7:42 AM IST

jala-sam

ಚಿಕ್ಕಬಳ್ಳಾಪುರ: ಬರಪೀಡಿತ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೆ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿ ಕೊಂಡು ಹೆಚ್ಚು ಜಲ ಸಂರಕ್ಷಣೆ ಹಾಗೂ ಅರಣ್ಯೀಕರಣಕ್ಕೆ ಒತ್ತು ನೀಡುವ ಮೂಲಕ ಅಧಿಕಾರಿಗಳು ಹಸಿರು  ಕ್ರಾಂತಿಗೆ ನಾಂದಿ ಯಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ನಗರದ ಜಿಪಂನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿ ತಾಲೂಕಿ   ನಲ್ಲಿ  ವಾರ್ಷಿಕ ಕನಿಷ್ಟ 100 ಕೋಟಿ ರೂ. ವೆಚ್ಚದ ನರೇಗಾ ಕಾಮಗಾರಿಗಳು ನಡೆಯಬೇಕು.

ಜಿಲ್ಲೆಯಲ್ಲಿ ಒಟ್ಟು 500 ರಿಂದ 600 ಕೋಟಿ ಅನುದಾನ ಖರ್ಚು ಆಗಬೇಕೆಂದು ಅಧಿಕಾರಿಗಳಿಗೆ ಗುರಿ ನಿಗದಿಪಡಿಸಿದರು. ಸಾಮಾಜಿಕ ಅರಣ್ಯ ಇಲಾಖೆ,  ಸಾರ್ವಜ  ನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್‌ ಅಂಡ್‌ ಗೈಡ್‌, ಎನ್‌ಎಸ್‌ಎಸ್‌, ಎನ್‌ಸಿಸಿ ವಿದ್ಯಾರ್ಥಿ  ಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿ ಗಿಡ ನೆಡುವ ಮೂಲಕ ಸಾಮಾಜಿಕ ಅರಣ್ಯಕ್ಕೆ ಒತ್ತು ಕೊಟ್ಟು ಆ ಮೂಲಕ ಜಲ ಸಂರಕ್ಷಣೆ  ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು.

ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ: ಜಿಲ್ಲೆಯಲ್ಲಿ ಪ್ರತಿ ತಿಂಗಳು ಇಲಾಖೆ ಕೆಲಸ ಕಾರ್ಯಗಳಲ್ಲಿ ಅತ್ಯುತ್ತಮವಾಗಿ ಸೇವೆ ಮಾಡುವ ಅಧಿಕಾರಿಯನ್ನು  ಗುರುತಿಸಿ ಸನ್ಮಾನಿಸಲು ಡೀಸಿ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಳಜಿ ಇರುವ ಅಧಿಕಾರಿಗಳು ಇರಿ, ಅಭಿವೃದ್ಧಿಗೆ ಸ್ಪಂದಿಸದ ಅಧಿಕಾರಿಗಳು ಜಿಲ್ಲೆಯಿಂದ ಬೇರೆಡೆಗೆ ತೆರಳಬಹುದು ಎಂದರು.  ಕೃಷಿ ಇಲಾಖೆ, ತೋಟಗಾರಿಕೆ,  ರೇಷ್ಮೆ ಇಲಾಖೆಗಳು ನರೇಗಾ ಯೋಜನೆಯಡಿ ಬರುವ ವಿವಿಧ ಯೋಜನೆಗಳನ್ನು ರೈತರಿಗೆ ತಲುಪಿಸಿ ರೈತರ ಅಭಿವೃದ್ಧಿಗೆ ಈ ಎಲ್ಲಾ ಇಲಾಖೆಗಳು ಸಮ ನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಕುಡಿಯುವ ನೀರು,  ನೈರ್ಮಲ್ಯ, ಸ್ವತ್ಛ ಭಾರತ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿಯನ್ನು ಇಲಾಖಾವರು ನಡೆಸಲಾ ಯಿತು. ಕೋಲಾರ ಸಂಸದರಾದ ಎಸ್‌.ಮುನಿಸ್ವಾಮಿ, ಶಾಸಕರಾದ ಜೆ.ಕೆ.ಕೃಷ್ಣಾರೆಡ್ಡಿ,  ಎಸ್‌.ಎನ್‌.ಸುಬ್ಟಾರೆಡ್ಡಿ, ತೂಪಲ್ಲಿ ಚೌಡರೆಡ್ಡಿ, ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ, ಉಪಾಧ್ಯಕ್ಷೆ ನಿರ್ಮಲಾ, ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌  ಕುಮಾರ್‌, ಎಸಿ ರಘನಂದ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಜಿ ಸಂಸದರ ಮನೆ ಬಾಗಿಲು ಕಾಯ್ತಾರೆ: ಸಭೆಯಲ್ಲಿ ಸಂಸದ ಎಸ್‌.ಮುನಿಸ್ವಾಮಿ ಮಾತನಾಡಿ, ಶಿಡ್ಲಘಟ್ಟದ ತಹಶೀಲ್ದಾರ್‌, ಇಒ ಮಾಜಿ ಸಂಸದರ ಮನೆ ಬಾಗಿಲು ಕಾಯುತ್ತಾರೆಂದು ಆಕ್ರೋಶ ವ್ಯಕ್ತಪಡಿಸಿದರು. ಏನೇ ಸಮಸ್ಯೆ ಇದ್ದರೂ  ಸಂಸದರು, ಶಾಸಕರ ಗಮನಕ್ಕೆ ತರಬೇಕು. ಮಾಜಿ ಸಂಸದರ ಮನೆಗೆ ಏಕೆ ಹೋಗಬೇಕೆಂದು ಪ್ರಶ್ನಿಸಿದರು. ಯಾರು ತುಘಲಕ್‌ ದರ್ಬಾರ್‌ ಮಾಡಬೇಡಿ ಎಂದರು.

ಟಾಪ್ ನ್ಯೂಸ್

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-koratagere

Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.