45 ಜನರ ಗಂಟಲು ದ್ರವ ಪರೀಕ್ಷೆಗೆ-ಆತಂಕ

Team Udayavani, May 27, 2020, 11:11 AM IST

27-May-02

ಸಾಂದರ್ಭಿಕ ಚಿತ್ರ

ಗುರುಮಠಕಲ್‌: ತಾಲೂಕಿನ ಕಂದಕೂರು ಗ್ರಾಮದ ವಸತಿ ನಿಲಯ ಗಳಲ್ಲಿ ಕ್ವಾರಂಟೈನ್‌ ಮಾಡಲಾಗಿದ್ದ 50 ಜನರ ಪೈಕಿ ಐವರಲ್ಲಿ ಎರಡ್ಮೂರು ದಿನದ ಹಿಂದೆ ಮಹಾಮಾರಿ ಕೋವಿಡ್‌-19 ಸೋಂಕು ದೃಢಪಟ್ಟಿದ್ದು, ಉಳಿದವರಲ್ಲಿ ಆತಂಕ ಶುರುವಾಗಿದೆ.

ಮಹಾರಾಷ್ಟ್ರದಿಂದ ಆಗಮಿಸಿದ 50 ಜನರ ಪೈಕಿ ಕಂದಕೂರು ಎಸ್‌ಸಿ, ಎಸ್‌ಟಿ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್‌ ಮಾಡಲಾದ 25 ಜನರಲ್ಲಿ ಮೂವರಿಗೆ ಮತ್ತು ಸರ್ಕಾರಿ ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್‌ ಮಾಡಲಾದ 25 ಜನರಲ್ಲಿ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಈ ಎರಡೂ ಕೇಂದ್ರಗಳ ಉಳಿದ 45 ಜನರ ಗಂಟಲು ದ್ರವ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ.

ಮುಂಬಯಿನ ಧಾರಾವಿ ಪ್ರದೇಶದಿಂದ ಬಂದಿದ್ದ ಕಂದಕೂರಿನ 6 ವರ್ಷದ ಮಗು (ಪಿ-1755) ಸೇರಿದಂತೆ ಪಿ-1759, ಪಿ-1762 ಹಾಗೂ ಚಿಂತನಹಳ್ಳಿ ತಾಂಡಾದ ಪಿ-1757, ಪಿ-1761 ದಂಪತಿ ಸೇರಿ ಐವರಿಗೆ ಸೋಂಕು ದೃಢಪಟ್ಟಿದೆ. ಅವರೊಂದಿಗೆ ನಾವೂ ಒಂದೇ ಕೋಣೆಯಲ್ಲಿದ್ದೆವು. ಹತ್ತು ದಿನಗಳಿಂದ ಪರೀಕ್ಷೆ ಮಾಡುವಂತೆ ಅಲವತ್ತುಕೊಂಡರೂ ಅಧಿಕಾರಿಗಳು ಸ್ಪಂದಿಸಿಲ್ಲ. ಒಂದೇ ಕೋಣೆಯಲ್ಲಿದ್ದ ನಮಗೂ ಸೋಂಕು ಹರಡಿದೆಯೇನೋ ಎನ್ನುವ ಭಯ ಕಾಡುತ್ತಿದೆ ಎನ್ನುತ್ತಾರೆ ಕ್ವಾರಂಟೈನ್‌ ಕೇಂದ್ರದಲ್ಲಿರುವವರು.

ಕ್ವಾರಂಟೈನ್‌ ಕೇಂದ್ರದಲ್ಲಿ ಊಟದ ಸಮಸ್ಯೆಯೂ ತೀವ್ರವಾಗಿತ್ತು. ಸಮಯಕ್ಕೆ ಸರಿಯಾಗು ಊಟ ಬರುತ್ತಿರಲಿಲ್ಲ. ಬೆಳಗ್ಗೆ 10 ಗಂಟೆಗೆ ಉಪಹಾರ ಬಂದರೆ, ರಾತ್ರಿ ಊಟ 9 ಗಂಟೆಗೆ ಕೊಡುತ್ತಿದ್ದರು. ಅದೂ ಕೂಡ ಒಮ್ಮೊಮ್ಮೆ ತಿನ್ನಲಾಗದೆ ಚೆಲ್ಲುವಂತಿರುತ್ತಿತ್ತು. ಈಗೀಗ ಮೂರು ದಿನಗಳಿಂದ ಉತ್ತಮ ಊಟ ಮತ್ತು ಸಮಯಕ್ಕೆ ಸರಿಯಾಗಿ ಬರುತ್ತಿದೆ ಎಂದು ಸಾಬರೆಡ್ಡಿ ಹಾಗೂ ಅಶೋಕ ತಿಳಿಸಿದರು

ನಮ್ಮ ಕೋಣೆಯಲ್ಲಿಯೇ ಇದ್ದ ಮೂವರಿಗೆ ಕೊರೊನಾ ಸೋಂಕಿರುವುದು ಪತ್ತೆಯಾಗಿದೆ. ನಮಗೂ ಪರೀಕ್ಷೆ ಮಾಡುವಂತೆ ಕೋರಿದ್ದೆವು. ಬಂದು ಗಂಟಲು ದ್ರವದ ಮಾದರಿಗಳನ್ನು
ತೆಗೆದುಕೊಂಡಿದ್ದಾರೆ.
ಜಗದೀಶ,
ಕ್ವಾರಂಟೈನ್‌ ಕೇಂದ್ರದಲ್ಲಿರುವ ಯುವಕ.

ಕಂದಕೂರಿನ ಎರಡೂ ವಸತಿ ಶಾಲೆಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಟ್ಟವರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದೇವೆ.
ಡಾ| ಹಣಮಂತರೆಡ್ಡಿ,
ತಾಲೂಕು ವೈದ್ಯಾಧಿಕಾರಿ

ಟಾಪ್ ನ್ಯೂಸ್

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.