ಮೂಳೂರು : ವಾಹನಗಳೆರಡು ಢಿಕ್ಕಿ – ಸಂಚಾರ ಅಸ್ತವ್ಯಸ್ತ | Udayavani
Team Udayavani, May 27, 2020, 11:16 AM IST
ಕಾಪು, ಮೇ 27 : ಶಿವಮೊಗ್ಗದಿಂದ ಮಂಗಳೂರು ಕಡೆ ಸಾಗುತ್ತಿದ್ದ ಪಿಕ್ಆಪ್ ವಾಹನವೊಂದು ಹೆದ್ದಾರಿ ಮದ್ಯೆ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ನಡೆದಿದೆ. ಬಾಳೆಹಣ್ಣು ತುಂಬಿಸಿಕೊಂಡು ಮಂಗಳೂರಿಗೆ ತೆರಳುತ್ತಿದ್ದ ಮಿಬಿ ಟೆಂಫೋ ನಿಯಂತ್ರಣ ತಪ್ಪಿ ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಬಾಳೆಹಣ್ಣು ವಾಹನದ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅರ್ಧ ಗಂಟೆಗಳ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರ ಸುಗಮಗೊಳಿಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ