ಶ್ರಮಿಕ ರೈಲುಗಳಲ್ಲಿ 2.33 ಲಕ್ಷ ಕಾರ್ಮಿಕರು ಪ್ರಯಾಣ
Team Udayavani, May 27, 2020, 11:55 AM IST
ಹುಬ್ಬಳ್ಳಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸ್ವರಾಜ್ಯಗಳಿಗೆ ತೆರಳುವ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಕೈಗೊಳ್ಳುವಲ್ಲಿ ರೈಲ್ವೆ ಇಲಾಖೆ ಪ್ರಮುಖ ಪಾತ್ರ ತೋರಿದ್ದು, ನೈರುತ್ಯ ರೈಲ್ವೆ ವಲಯದ ರೈಲುಗಳಲ್ಲಿ ಕಳೆದ 23 ದಿನಗಳಲ್ಲಿ ರಾಜ್ಯದಿಂದ ವಿವಿಧ ರಾಜ್ಯಗಳಿಗೆ ಸುಮಾರು 2.33ಲಕ್ಷ ಕಾರ್ಮಿಕರು ಪ್ರಯಾಣ ಕೈಗೊಂಡಿದ್ದಾರೆ.
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಲಾಕ್‌ಡೌನ್ ಘೋಷಿಸಿದ್ದರಿಂದ ರೈಲು, ವಿಮಾನ, ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಅತ್ಯವಶ್ಯ ವಸ್ತುಗಳ ಸಾಗಣೆ ರೈಲುಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದವು.ಲಾಕ್‌ಡೌನ್ ನಿಯಮಗಳಲ್ಲಿ ಕೊಂಚ ಸಡಿಲಗೊಳಿಸಿ, ಕಾರ್ಮಿಕರು ತಮ್ಮ ಸ್ವರಾಜ್ಯಗಳಿಗೆ ತೆರಳಲು ಅನುವು ಮಾಡಿಕೊಡಲು ಶ್ರಮಿಕ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಮುಂದಾಗಿತ್ತು. ಕೇಂದ್ರ ಸರಕಾರ ಹಾಗೂ ರೈಲ್ವೆ ಮಂಡಳಿ ಸೂಚನೆ ಮೇರೆಗೆ ನೈರುತ್ಯ ರೈಲ್ವೆ ವಲಯ ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಲ, ತ್ರಿಪುರ, ಉತ್ತರಖಂಡ, ಮಣಿಪುರ, ಜಮ್ಮು-ಕಾಶ್ಮೀರ, ಒಡಿಶಾ, ಇನ್ನಿತರ ರಾಜ್ಯಗಳಿಗೆ ಶ್ರಮಿಕ ರೈಲು ಸಂಚಾರವನ್ನು ಬೆಂಗಳೂರು, ಹುಬ್ಬಳ್ಳಿ ಇನ್ನಿತರ ಕಡೆಗಳಿಂದ ಕೈಗೊಂಡಿತ್ತು.
ಮೇ 3ರಿಂದ 26ರವರೆಗೆ ನೈರುತ್ಯ ರೈಲ್ವೆ ವಲಯ ಒಟ್ಟು 163 ಶ್ರಮಿಕ ರೈಲುಗಳ ಸಂಚಾರ ಕೈಗೊಂಡಿದ್ದು, ಇದರಲ್ಲಿ ಸುಮಾರು 2,33,180 ಕಾರ್ಮಿಕರು ಇನ್ನಿತರರು ಪ್ರಯಾಣಿಸಿದ್ದಾರೆ ಎಂದು ನೈರುತ್ಯ ರೈಲ್ವೆ ವಲಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.