ಇನ್ನೂ 1,508 ಜನರ ವರದಿ ಬಾಕಿ
Team Udayavani, May 27, 2020, 3:17 PM IST
ಬೆಳಗಾವಿ: ಕೋವಿಡ್ ವಿರುದ್ಧ ಹೋರಾಡುತ್ತಿರುವ ಬೆಳಗಾವಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 13 ಹೊಸ ಪ್ರಕರಣಗಳು ದೃಢವಾಗಿದ್ದು, ಇನ್ನೂ 1,508 ಜನರ ಗಂಟಲು ದ್ರವ ಮಾದರಿ ವರದಿ ಬರುವುದು ಬಾಕಿ ಇದೆ.
ಸೋಂಕಿನಿಂದ ಒಟ್ಟು 94 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್ -19 ಆಸ್ಪತ್ರೆಯಲ್ಲಿ 48 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 11,037 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 2,989 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 3,603 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 4,397 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 9,741 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 7,934 ಜನರ ವರದಿ ನಕಾರಾತ್ಮಕವಾಗಿದೆ.
ಒಟ್ಟು 1,508 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಕ್ಯೆ 143 ಆಗಿದ್ದು, ಅದಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ. ಹಿರೇಬಾಗೇವಾಡಿಯ ವೃದ್ಧೆ ಕೋವಿಡ್‌ದಿಂದ ಮೃತಪಟ್ಟಿದ್ದಾಳೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ವೈದ್ಯಕೀಯ ವರದಿ ತಿಳಿಸಿದೆ. ಜಿಲ್ಲೆಯಲ್ಲಿ ಕೋವಿಡ್ ಹಾಟ್‌ಸ್ಪಾಟ್ ಎಂದು ಖ್ಯಾತಿ ಪಡೆದಿದ್ದ ರಾಯಬಾಗ ತಾಲೂಕಿನ ಕುಡಚಿ ನಗರ ಪ್ರದೇಶದಲ್ಲಿ ಸೋಂಕಿತರು ಗುಣಮುಖರಾಗಿದ್ದರಿಂದ ಇಡೀ ನಗರ ಪ್ರದೇಶವನ್ನು ಡಿನೋಟಿಫೆ„ ಮಾಡಿ ಜಿಲ್ಲಾಧಿ ಕಾರಿಗಳು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.