ಹಣ ಬಾರದ ರೈತರ ಮಾಹಿತಿ ಸಲ್ಲಿಸಲು ಸೂಚನೆ
Team Udayavani, May 27, 2020, 4:27 PM IST
ಹಿರೇಕೆರೂರ: ಕಿಸಾನ್ ಸಮ್ಮಾನ್ ಯೋಜನೆಯಡಿ ಹಣ ಬರದೇ ಇರುವ ರೈತರ ಮಾಹಿತಿಯನ್ನು ಮೂರು ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಕೃಷಿ ಅಧಿಕಾರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ ಸೂಚಿಸಿದರು.
ಇಲ್ಲಿನ ತಾಪಂ ಸಭಾಭವನದಲ್ಲಿ ನಡೆದ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿ ಅಧಿಕಾರಿಗಳು ಕಚೇರಿಯಲ್ಲಿದ್ದುಕೊಂಡು ಕೆಲಸ ಮಾಡದೇ, ರೈತರ ಜಮೀನುಗಳಿಗೆ ತೆರಳಿ ಅವರಿಗೆ ಅಗತ್ಯ ಮಾಹಿತಿ ನೀಡಬೇಕು. ರೈತ ಸಂಪರ್ಕ ಕೇಂದ್ರಗಳಿಂದ ವಿತರಣೆಯಾಗುವ ಬಿತ್ತನೆ ಬೀಜದ ದಾಸ್ತಾನು ಮತ್ತು ವಿತರಣೆಯ ಸಮಗ್ರ ಮಾಹಿತಿ ದಾಲಿಸಬೇಕು ಎಂದು ಸೂಚಿಸಿದರು.
ಪಟ್ಟಣದಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹಂದಿಗಳನ್ನು ಹಿಡಿದು ಬೇರೆಡೆಗೆ ಸಾಗಿಸಲು ಹಿಂದಿನ ಸಭೆಯಲ್ಲಿ ಸೂಚಿಸಲಾಗಿತ್ತು, ಈ ವರೆಗೂ ಪಪಂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಕೂಡಲೇ ಹಂದಿಗಳನ್ನು ಸ್ಥಳಾಂತರ ಮಾಡಲು ಸೂಚಿಸಿದರು. ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಿದ್ದರಿಂದ ತಾಲೂಕಿನಲ್ಲಿ ಯಾವುದೇ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಶ್ಲಾಘಿಸಿದರು.
ಶುದ್ಧ ಕುಡಿಯುವ ನೀರಿನ ಘಟಕ ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಸ್ಥಗಿತಗೊಳ್ಳದಂತೆ ಮುಂಜಾಗ್ರತೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಉಪವಿಭಾಗಾಧಿಕಾರಿ, ಡಾ| ದಿಲಿಸ್ ಶಶಿ, ತಾಪಂ ಅಧ್ಯಕ್ಷ ರಾಜು ಬಣಕಾರ, ಜಿಪಂ ಸದಸ್ಯರಾದ ಎಸ್.ಕೆ. ಕರಿಯಣ್ಣನವರ, ಶಿವರಾಜ ಹರಿಜನ, ಸುಮಿತ್ರಾ ಪಾಟೀಲ, ಮಾದೇವಕ್ಕ ಗೋಪಕ್ಕಳ್ಳಿ, ತಹಶೀಲ್ದಾರ್ ಆರ್.ಎಚ್. ಭಾಗವಾನ್, ಕೆ.ಗುರುಬಸವರಾಜ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಎಚ್.ಜಿ., ಮೋಹನಕುಮಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.