ಸಾಂಸ್ಥಿಕ ಕ್ವಾರಂಟೈನ್ ಪೂರ್ಣ: ಹೊರ ರಾಜ್ಯಗಳ 9 ಜನ ಮನೆಗೆ
Team Udayavani, May 27, 2020, 4:27 PM IST
ಸಾಂದರ್ಭಿಕ ಚಿತ್ರ
ಮೊಳಕಾಲ್ಮೂರು: ಪಟ್ಟಣದ ಹೊರ ವಲಯದಲ್ಲಿರುವ ಆರ್.ಎಂ.ಎಸ್.ಎ ಬಾಲಕಿಯರ ವಸತಿ ನಿಲಯದಲ್ಲಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ 9 ಜನರನ್ನು ಬಿಡುಗಡೆಗೊಳಿಸಿ ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಯಿತು.
ಮೇ 16 ರಂದು ಪಟ್ಟಣದ ಹೊರ ವವಲಯದಲ್ಲಿರುವ ಆರ್.ಎಂ.ಎಸ್.ಎ ಬಾಲಕಿಯರ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರವನ್ನು ತೆರೆಯಲಾಗಿತ್ತು. ಆರಂಭದಲ್ಲಿ ಹೊರ ರಾಜ್ಯಗಳಾದ ಆಂಧ್ರ, ಚೆನ್ನೈ ಹಾಗೂ ದೆಹಲಿ ರಾಜ್ಯಗಳಿಂದ ಬಂದ 6 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ನಲ್ಲಿಡಲಾಗಿತ್ತು. ನಂತರ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬಂದ 8 ವ್ಯಕ್ತಿಗಳು ಬಂದಿದ್ದು, ಅವರನ್ನು ಹತ್ತಿರದ ಮೊರಾರ್ಜಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿಡಲಾಗಿದೆ. ಒಟ್ಟು 14 ಜನ ಹೊರ ರಾಜ್ಯಗಳಿಂದ ಬಂದಿದ್ದು, ಅವರನ್ನು ಆರ್.ಎಂ.ಎಸ್.ಎ ಬಾಲಕಿಯರ ವಸತಿ ಶಾಲೆ ಮತ್ತು ಮೊರಾರ್ಜಿ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿಡಲಾಗಿತ್ತು. ಇವರಲ್ಲಿ ಸರ್ಕಾರದ ನಿರ್ದೇಶನದಂತೆ ಕ್ವಾರಂಟೈನ್ ಅವಧಿ 14 ದಿನಗಳ ಬದಲು 7 ದಿನಗಳಿಗೆ ಕಡಿತಗೊಳಿಸಿರುವುದರಿಂದ 7 ದಿನಗಳನ್ನು ಪೂರೈಸಿದ ಹಾಗೂ ಇವರ ಗಂಟಲು ದ್ರವ ವರದಿ ನೆಗೆಟಿವ್ ಬಂದಿರುವುದರಿಂದ 9 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ನಿಂದ ಬಿಡುಗಡೆಗೊಳಿಸಿ ಹೋಂ ಕ್ವಾರಂಟೈನ್‌ಗೆ ಸೂಚಿಸಲಾಗಿದೆ.
ಉಪತಹಶೀಲ್ದಾರ್ ಜಿ.ಎಚ್. ಏಳುಕೋಟಿ, ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ತಾಪಂ ಸಹಾಯಕ ನಿರ್ದೇಶಕ ಸದಾಶಿವಪ್ಪ ತಗ್ಗಿ, ಪಿಎಸ್‌ಐ ಎಂ.ಕೆ. ಬಸವರಾಜ್, ಕಂದಾಯ ನಿರೀಕ್ಷಕ ಉಮೇಶ್, ಜಿಲ್ಲಾ ಆರ್.ಆರ್. ತಂಡದ ಮೇಲ್ವಿಚಾರಕ ಒ. ಶ್ರೀನಿವಾಸ್, ವೈ. ತಿಪ್ಪೇಸ್ವಾಮಿ, ಶುಶ್ರೂಷಕಿ ಸುಧಾ, ಅನಿಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.