ಶಾಲಾ-ಕಾಲೇಜು ಶುಲ್ಕ ಸರ್ಕಾರವೇ ಭರಿಸಲಿ
Team Udayavani, May 27, 2020, 4:59 PM IST
ಬಳ್ಳಾರಿ: ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು
ಬಳ್ಳಾರಿ: ವಿದ್ಯಾರ್ಥಿಗಳ ಶಾಲಾ, ಕಾಲೇಜು ಶುಲ್ಕವನ್ನು ಸರ್ಕಾರವೇ ಭರಿಸಬೇಕು. ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಪರೀಕ್ಷಾ ರೂಪುರೇಷೆಗಳನ್ನು ಸಿದ್ಧಪಡಿಸಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಎಲ್ಲ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳ ಶುಲ್ಕವನ್ನು ಸರ್ಕಾರವೇ ಭರಿಸಬೇಕು. ವಿವಿ ಪರೀಕ್ಷಾ ಶುಲ್ಕವನ್ನು ರದ್ದುಪಡಿಸಬೇಕು. ಈಗಾಗಲೇ ಪಡೆದಿದ್ದ ಶುಲ್ಕವನ್ನು ವಾಪಸ್ ನೀಡಬೇಕು. ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಬಸ್ ಪಾಸ್‌ಗಳನ್ನು ನೀಡಬೇಕು. ಎಲ್ಲ ವಿದ್ಯಾರ್ಥಿಗಳ ಶಿಷ್ಯ ವೇತನಗಳನ್ನು (ಸ್ಕಾಲರ್ಶಿಪ್) ಹೆಚ್ಚಿಸಬೇಕು. ಆನ್‌ಲೈನ್ ತರಗತಿಗಳ ಆಧಾರದ ಮೇಲೆ ಪರೀಕ್ಷೆ ನಡೆಸಬಾರದು.ಕ್ವಾರಂಟೈನ್ ಕೇಂದ್ರಗಳಾಗಿ ಬಳಸಿದ್ದ ಶಾಲೆ, ಕಾಲೇಜು, ಹಾಸ್ಟೆಲ್ ಕಟ್ಟಡಗಳನ್ನು ಸಂಪೂರ್ಣವಾಗಿ ಶುದ್ಧೀಕರಿಸಿ ಸ್ಯಾನಿಟೈಸ್ ಮಾಡಿದ ನಂತರವೇ ವಿದ್ಯಾರ್ಥಿಗಳಿಗೆ ಅದನ್ನು ತೆರೆಯಬೇಕು. ವಿದ್ಯಾರ್ಥಿಗಳಿಗೂ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿಯಲ್ಲಿ ಅವರು ಆಗ್ರಹಿಸಿದ್ದಾರೆ. ಈ ವೇಳೆ ಜಿಲ್ಲಾ ಕಾರ್ಯದರ್ಶಿ ಜೆ.ಪಿ. ರವಿಕಿರಣ್ ಸೇರಿ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.