ರುದ್ರಪಶುಪತಿ ಶ್ರೀ ಕೊಲೆ ತನಿಖೆ ಸಿಬಿಐಗೊಪ್ಪಿಸಿ

ಮಠಾಧೀಶರ ನೇತೃತ್ವದಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳ ಪ್ರತಿಭಟನೆ-ಮನವಿ

Team Udayavani, May 27, 2020, 12:20 PM IST

27-May-22

ಹೊಸಪೇಟೆ: ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು ತಹಶೀಲ್ದಾರ್‌ ಎಚ್‌.ವಿಶ್ವನಾಥ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಹಗರಿಬೊಮ್ಮನಹಳ್ಳಿ: ಮಹಾರಾಷ್ಟ್ರದ ನಾಗಠಾಣ ನಿರ್ವಾಣಿ ಮಠದ ರುದ್ರಪಶುಪತಿ ಮಹರಾಜ್‌ರ ಕೊಲೆಗಾರರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಮಠಾಧೀಶರ ನೇತೃತ್ವದಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳು ತಹಶೀಲ್ದಾರ್‌ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಮಾತನಾಡಿ, ರುದ್ರಪಶುಪತಿ ಶಿವಾಚಾರ್ಯ ಮಹಾರಾಜ್‌ರ ಕೊಲೆ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೊಳಪಡಿಸಬೇಕು. ಮಹಾರಾಷ್ಟ್ರದಲ್ಲಿ ಈಗಾಗಲೇ 3 ಸಾಧುಗಳ ಕೊಲೆಯಾಗಿವೆ. ದೇಶದಲ್ಲಿ ಮಠಮಾನ್ಯಗಳಿಗೆ ಭದ್ರತೆ ನೀಡುವಂತಹ ಸ್ಥಿತಿ ನಿರ್ಮಾಣವಾಗಿರುವುದು ದುರಾದೃಷ್ಟಕರವಾಗಿದೆ. ಪ್ರಾಪಂಚಿಕ ಸುಖಭೋಗಗಳನ್ನು ತೊರೆದು ಸಮಾಜದ ಹಿತಕ್ಕಾಗಿ ಅರ್ಪಿಸಿಕೊಂಡ ಸಾಧುಗಳ ಕೊಲೆಯಾಗುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಕೊಲೆ ಹಿಂದಿನ ಸತ್ಯ ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದರು.

ಉಪನ್ಯಾಸಕ ಜಿ.ಎಂ.ಜಗದೀಶ್‌ ಮಾತನಾಡಿ, ರುದ್ರಪಶುಪತಿ ಶಿವಾಚಾರ್ಯರ ಕೊಲೆಗಾರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ದೇಶದ ಧಾರ್ಮಿಕ ಸಂಸ್ಕೃತಿ ಮತ್ತು ಪರಂಪರೆ ಹಿರಿಮೆಗೆ ಮಠಾಧೀಶರು ಕಾರಣವಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಸ್ವಾಮೀಜಿಗಳನ್ನು ಕೊಲೆಗೈಯುತ್ತಿ ರುವುದರಿಂದ ಸ್ವಾಮೀಜಿಗಳು ಆತಂಕದಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ರುದ್ರಪಶುಪತಿ ಸ್ವಾಮೀಜಿ ಅತ್ಯಂತ ಲವಲವಿಕೆಯಿಂದ ಸಮಾಜಮುಖೀ ಕೆಲಸದಲ್ಲಿ ತೊಡಗಿಕೊಂಡಿದ್ದರು. ಇವರ ಕೊಲೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಇದಕ್ಕೂ ಮುನ್ನ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮೌನಾಚರಣೆ ನಡೆಸಿ ಅಗಲಿದ ಶ್ರೀಗಳಿಗೆ ಗೌರವ ನಮನ ಸಲ್ಲಿಸಿದರು. ತಹಶೀಲ್ದಾರ್‌ ಆಶಪ್ಪ ಪೂಜಾರ್‌ಗೆ ಮನವಿ ಸಲ್ಲಿಸಿದರು. ಗದ್ದಿಕೇರಿ ಚರಂತೇಶ್ವರ ಸ್ವಾಮೀಜಿ, ಹಾಲ ಸಿದ್ದೇಶ್ವರ ಸ್ವಾಮೀಜಿ, ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಅಕ್ಕಿ ಶಿವಕುಮಾರ್‌, ಮಾಜಿ ಅಧ್ಯಕ್ಷ ವೈ. ಮಲ್ಲಿಕಾರ್ಜುನ, ಛೇಂಬರ್‌ ಆಫ್‌ ಕಾಮರ್ಸ್‌ ಅಧ್ಯಕ್ಷ ಎಚ್‌.ಎಂ. ಚಂದ್ರಯ್ಯ, ಗುತ್ತಿಗೆದಾರ ಉಮಾಪತಿ, ಸಂತೋಷ್‌ ಪೂಜಾರ, ಬಿವಿ ಆರ್ಟ್ಸ್ ನಾಗರಾಜ, ಚಂದ್ರಶೇಖರ, ಡಾ| ಬಿ.ಎಂ.ಡಿ. ಬಸವರಾಜ, ಬಸವನಗೌಡ, ಶ್ರೀಶೈಲ, ಕೊಟ್ರೇಶ್‌ ಶೆಟ್ಟರ್‌, ಚಂದ್ರಶೇಖರ, ಶಿವರುದ್ರಪ್ಪ, ನಾಗರಾಜ, ಎಚ್‌.ನಾಗರಾಜ, ಎಂ.ವೀರೇಶ, ಸಂಚಿ ಶಿವಕುಮಾರ ಇತರರಿದ್ದರು

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.