ಹೊರ ರಾಜ್ಯದಿಂದ ಬಂದವರ ಮೇಲೆ ನಿಗಾ

ಶಿಗ್ಗಾವಿ-ಸವಣೂರು ಮಾದರಿಯಲ್ಲೇ ಜನರ ಆರೋಗ್ಯ ತಪಾಸಣೆ ನಡೆಯಲಿ: ಡಿಸಿ ಭಾಜಪೇಯಿ

Team Udayavani, May 28, 2020, 7:38 AM IST

ಹೊರ ರಾಜ್ಯದಿಂದ ಬಂದವರ ಮೇಲೆ ನಿಗಾ

ಹಾವೇರಿ: ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಹಶೀಲ್ದಾರರೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಹಾವೇರಿ: “ಸೇವಾ ಸಿಂಧು’ ಆ್ಯಪ್‌ನಲ್ಲಿ ದಾಯಿಸಿಕೊಳ್ಳದೆ ಅನ್ಯಮಾರ್ಗದಲ್ಲಿ ಯಾರಾದರೂ ಹೊರ ರಾಜ್ಯದಿಂದ ಜಿಲ್ಲೆಯೊಳಗೆ ಬಂದಿದ್ದರೆ ಅವರನ್ನು ಪತ್ತೆ ಮಾಡಿ ಕೂಡಲೇ ಕ್ವಾರಂಟೈನ್‌ಗೆ ಒಳಪಡಿಸಬೇಕು ಹಾಗೂ ಅವರ ಗಂಟಲು ದ್ರವ ಲ್ಯಾಬ್‌ಗ ಕಳುಹಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಎಲ್ಲ ತಹಶೀಲ್ದಾರ್‌ಗೆ ಸೂಚಿಸಿದರು.

ತಾಲೂಕು ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ವೇಳೆ ಅವರು ಮಾತನಾಡಿದರು. ಸೇವಾ ಸಿಂಧು ನೋಂದಣಿ ಪ್ರಕಾರ ಹೊರ ರಾಜ್ಯದಿಂದ ಜಿಲ್ಲೆಗೆ ಆಗಮಿಸಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರುವವರು, ಕ್ವಾರಂಟೈನ್‌ ಅವಧಿ ಮುಗಿಸಿದವರು, ಗೃಹ ಕ್ವಾರಂಟೈನ್‌ ಆದವರ ನಿಖರ ಮಾಹಿತಿಯನ್ನು ಪ್ರತಿ ತಹಶೀಲ್ದಾರರು ಹೊಂದಬೇಕು. ಯಾವುದೇ ಕಾರಣಕ್ಕೂ ಹೊರ ರಾಜ್ಯದಿಂದ ಬಂದವರು ಆರೋಗ್ಯ ತಪಾಸಣೆ ಹಾಗೂ ಕ್ವಾರಂಟೈನ್‌ನಿಂದ ಹೊರಗುಳಿಯಬಾರದು. ಆರೋಗ್ಯ ಇಲಾಖೆಯ ಎಸ್‌ಓಪಿ ಪ್ರಕಾರ ಕ್ರಮವಹಿಸಬೇಕು ಹಾಗೂ ಸೋಂಕು ಹೆಚ್ಚಾಗಿರುವ ಜಿಲ್ಲೆಗಳಿಂದ ಬರುವವರ ಮೇಲೂ ನಿಗಾವಹಿಸಬೇಕು. ಅಗತ್ಯ ಬಿದ್ದರೆ ತಪಾಸಣೆಗೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು. ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರುವವರಿಗೆ ಉತ್ತಮ ಊಟ, ಉಪಹಾರ ನೀಡಬೇಕು. ಯಾವುದೇ ಕೊರತೆಯಾಗಬಾರದು. ಸ್ವತ್ಛತೆಗೆ ಆದ್ಯತೆ ನೀಡಬೇಕು. ಅಗತ್ಯವಿದ್ದರೆ ಕ್ವಾರಂಐನ್‌ ಕೇಂದ್ರಗಳಿಗೆ ಪ್ರತ್ಯೇಕ ಸ್ವಚ್ಛತಾ ಕೆಲಸಗಾರರನ್ನು ನೇಮಕ ಮಾಡಿಕೊಳ್ಳಬೇಕು. ಮಾಸ್ಕ್, ಸ್ಯಾನಿಟೈಸರ್‌ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿ ಕ್ವಾರಂಟೈನ್‌ ಸೆಂಟರ್‌ನಿಂದ ಸೋಂಕು ಹರಡಬಾರದು. ಈ ಕುರಿತಂತೆ ನಿರಂತರ ತಪಾಸಣೆ ನಡೆಸಿ ಒಂದೊಮ್ಮೆ ಈ ಕೇಂದ್ರಗಳಿಂದ ಸೋಂಕು ಹರಡಿದರೆ ತಾಲೂಕು ವೈದ್ಯಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ಕ್ವಾರಂಟೈನ್‌ ಕೇಂದ್ರದ ನಿರ್ವಹಣೆ ಕುರಿತಂತೆ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಇಲ್ಲಿನ ಸೌಕರ್ಯಗಳ ಕುರಿತಂತೆ ಸಮಗ್ರ ವರದಿ ಸಲ್ಲಿಸಲು ಸೂಚಿಸಲಾಗಿದೆ. ಕೇಂದ್ರಗಳ ಸೌಲಭ್ಯಗಳಲ್ಲಿ ಬದಲಾವಣೆಗಳಿದ್ದರೆ ನೋಡಲ್‌ ಅಧಿಕಾರಿಗಳು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಹೊರ ಜಿಲ್ಲೆಗಳಿಂದ ಆಗಮಿಸಿದವರಲ್ಲಿ ಕೋವಿಡ್‌ ಲಕ್ಷಣಗಳಿದ್ದರೆ ಅವರ ಆರೋಗ್ಯ ತಪಾಸಣೆ ನಡೆಸಿ ಕ್ವಾರಂಟೈನ್‌ಗೆ ಒಳಪಡಿಸಬೇಕು. ಈ ಕುರಿತಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಒಳಗೊಂಡ ಗ್ರಾಮ  ಸಮಿತಿ ತ್ವರಿತವಾಗಿ ಈ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

ಸರ್ಕಾರದ ಮಾರ್ಗಸೂಚಿಯಂತೆ ಆರೋಗ್ಯ ತಪಾಸಣೆ ಹಾಗೂ ಕ್ವಾರಂಟೈನ್‌ ನಿರ್ವಹಣೆ ಮಾಡಬೇಕು. ಯಾವುದೇ ಕಾರಣಕ್ಕೂ ಕೋವಿಡ್‌ ಮಾರ್ಗಸೂಚಿ ಹೊರತುಪಡಿಸಿ ಸ್ಥಳೀಯವಾಗಿ ನಿರ್ಧಾರ ತೆಗೆದುಕೊಂಡು ಯಾವುದೇ ಸಮಸ್ಯೆಗಳು ಎದುರಾದರೆ ತಹಶೀಲ್ದಾರರನ್ನು ಹೊಣೆಗಾರರನ್ನಾಗಿ ಮಾಡುವುದಾಗಿ ಅವರು ಎಚ್ಚರಿಸಿದರು.

ಜಿಪಂ ಸಿಇಒ ರಮೇಶ ದೇಸಾಯಿ ಮಾತನಾಡಿ, ಸವಣೂರ- ಶಿಗ್ಗಾವಿ ಮಾದರಿಯಲ್ಲಿ ಜಿಲ್ಲೆಯ ಉಳಿದ ತಾಲೂಕು ಪಟ್ಟಣ ಪ್ರದೇಶಗಳಲ್ಲಿ ವೈದ್ಯರ ಉಪಸ್ಥಿತಿಯಲ್ಲಿ ಆರೋಗ್ಯ ತಪಾಸಣೆ ನಡೆಸಬೇಕು. ವೈದ್ಯರ ಕೊರತೆ ಕಂಡಲ್ಲಿ ಆಯುಷ್‌ ವೈದ್ಯರು ಸ್ವಯಂ ಪ್ರೇರಣೆಯಿಂದ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ. ಅವರ ಸೇವೆ ಬಳಸಿಕೊಂಡು ತಪಾಸಣೆ ನಡೆಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ| ದಿಲೀಷ್‌ ಶಶಿ, ಆಹಾರ ಮತ್ತು ನಾಗರಿಕ ಸಬರಾಜು ಇಲಾಖೆ ವಿನೋದಕುಮಾರ ಹೆಗ್ಗಳಗಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ, ಆರ್‌ಸಿಎಚ್‌ ಅಧಿಕಾರಿ ಡಾ| ಜಯಾನಂದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಪಿ.ಕೆ. ಹಾವನೂರ, ತಹಶೀಲ್ದಾರ್‌ಗಳಾದ ಶಂಕರ್‌, ಬಸವನಗೌಡ ಕೊಟೂರ ಹಾಗೂ ಡಾ| ಪ್ರಭಾಕರ ಕುಂದೂರ ಇತರರು ಇದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

Malatesha Temple: ಸಿದ್ದರಾಮಯ್ಯ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ನಿರ್ಬಂಧ; ಭಕ್ತರ ಆಕ್ರೋಶ

Malatesha Temple: ಸಿಎಂ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರ ನಿರ್ಬಂಧ; ಆಕ್ರೋಶ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.