ಮಹದಾಯಿ ಸಮಗ್ರ ಯೋಜನಾ ವರದಿ ಸಿದ್ಧ
Team Udayavani, May 28, 2020, 7:54 AM IST
ಬೆಳಗಾವಿ: ಮಹದಾಯಿ ಯೋಜನೆ ಅನುಷ್ಠಾನ ವಿಚಾರದಲ್ಲಿ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಸಚಿವರಜತೆ ಚರ್ಚಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರ ಸುದ್ದಿಗಾಾರರ ಜತೆ ಮಾತನಾಡಿ, ಇದಕ್ಕೆ ಸಂಬಂಧಪಟ್ಟಂತೆ 800 ಕೋಟಿ ರೂ. ಯೋಜನೆಯ ರೂಪರೇಷೆ ಸಿದ್ಧವಾಗಿದೆ. ಆದಷ್ಟು ಬೇಗ ಇದಕ್ಕೆ ಚಾಲನೆ ನೀಡಲಾಗುವುದು ಎಂದರು.
ಕೊರೊನಾ ಲಾಕ್ಡೌನ್ದಿಂದ ನೀರಾವರಿ ಯೋಜನೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಮುಖ್ಯಮಂತ್ರಿಗಳು ಸಹ ಇಲಾಖೆ ಅನುದಾನದಲ್ಲಿ ಯಾವುದೇ ಕಡಿತ ಮಾಡಿಲ್ಲ. ಇದರಿಂದ ಬಾಕಿ ಉಳಿದಿರುವ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ನೆರವಾಗಲಿದೆ ಎಂದರು. ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಈಗ ಕುಡಿಯುವ ನೀರಿನ ಸಮಸ್ಯೆ ಇಲ್ಲ.
ಮುಂದಿನ ಬೇಸಿಗೆ ಬರುವಷ್ಟರಲ್ಲಿ ನೀರಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದ ಸಚಿವರು, ಕೃಷ್ಣಾನದಿ ನೀರಿನ ಹಂಚಿಕೆ ಕುರಿತಂತೆ ಮಹಾರಾಷ್ಟ್ರ ಸರಕಾರದ ಜತೆ ಮಾತುಕತೆ ನಡೆಸಬೇಕಿತ್ತು. ಆದರೆ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡಿರುವ ಕಾರಣ ಮಾತುಕತೆ ವಿಳಂಬವಾಗಿದೆ. ಇದರ ಬಗ್ಗೆ ಶೀಘ್ರವೇ ಚರ್ಚಿಸಿ ನೀರು ಹಂಚಿಕೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.