ಅಭಿವೃದ್ಧಿ-ಕೃಷಿ ಚಟುವಟಿಕೆ ನಿರಂತರವಾಗಿರಲಿ

ಫಲಾನುಭವಿಗಳಿಗೆ ಪಿಂಚಣಿ ಸಮರ್ಪಕವಾಗಿ ತಲುಪಿಸಿಅಧಿಕಾರಿಗಳಿಗೆ ಕಂದಾಯ ಸಚಿವ ಆರ್‌. ಅಶೋಕ್‌ ಸೂಚನೆ

Team Udayavani, May 28, 2020, 1:34 PM IST

28-May-13

ಚಿತ್ರದುರ್ಗ: ಜಿಪಂ ಸಭಾಂಗಣದಲ್ಲಿ ಕಂದಾಯ ಸಚಿವ ಆರ್‌. ಅಶೋಕ್‌ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಚಿತ್ರದುರ್ಗ: ಕೋವಿಡ್ ನಿಯಂತ್ರಣದ ಜತೆಗೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು, ಕೃಷಿ ಚಟುವಟಿಕೆ ನಿರಂತರವಾಗಿ ನಡೆಯಬೇಕು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದರು.

ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜೂನ್‌ 1ರ ನಂತರ ಲಾಕ್‌ಡೌನ್‌ ಸಡಿಲಿಕೆಯಾಗಲಿದ್ದು, ಹೋಟೆಲ್‌ ಸೇರಿದಂತೆ ಕೈಗಾರಿಕೆಗಳು ಆರಂಭವಾಗುವ ನಿರೀಕ್ಷೆ ಇದೆ. ಜಿಲ್ಲೆಯ ಜನರಿಗೆ ಆರೋಗ್ಯ ತಪಾಸಣೆಗೆ ತೊಂದರೆಯಾಗದಂತೆ ಎಲ್ಲ ಕ್ಲಿನಿಕ್‌, ನರ್ಸಿಂಗ್‌ ಹೋಂಗಳನ್ನು ಕಡ್ಡಾಯವಾಗಿ ತೆರೆಯಬೇಕು. ಕ್ಲಿನಿಕ್‌ ಹಾಗೂ ನರ್ಸಿಂಗ್‌ ಹೋಂ ತೆರೆಯದಿದ್ದರೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಸಂಬಂಧಪಟ್ಟವರಿಗೆ ನೋಟಿಸ್‌ ನೀಡಬೇಕು ಎಂದರು.

ಪಿಂಚಣಿ ಸರಿಯಾಗಿ ತಲುಪಿಸಿ: ವಿಕಲಚೇತನರು, ವೃದ್ಧಾಪ್ಯ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಆಯಾ ತಿಂಗಳ ಮಾಸಿಕ ಪಿಂಚಣಿಯನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಲಾಕ್‌ಡೌನ್‌ ಸಂದರ್ಭದಲ್ಲಿ ಮೂರು ತಿಂಗಳ ಪಿಂಚಣೆ ವಿತರಣೆಯಾಗಿಲ್ಲ ಎಂಬ ದೂರುಗಳು ಬಂದಿದೆ. ಹಾಗಾಗಿ ಒಂದು ವಾರದೊಳಗೆ ಸಮಗ್ರ ವರದಿ ನೀಡಬೇಕು ಎಂದು ತಾಕೀತು ಮಾಡಿದರು.

ಶಾಸಕ ಎಂ.ಚಂದ್ರಪ್ಪ ಪ್ರತಿಕ್ರಿಯಿಸಿ, ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಮಾಸಿಕ ಪಿಂಚಣಿ ಸಮರ್ಪಕವಾಗಿ ವಿತರಣೆಯಾಗಿಲ್ಲ. ಕೆಲವು ಫಲಾನುಭವಿಗಳಿಗೆ ಅಂಚೆ ಕಚೇರಿಯಿಂದ ಎಂಒ ಮೂಲಕ ತಲುಪಿಸಲಾಗುತ್ತಿದೆ. ಇದರಿಂದ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ಪಿಂಚಣಿ ಕೈಸೇರುತ್ತಿಲ್ಲ ಎಂದು ದೂರಿದರು. ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಸಾಮಾಜಿಕ ಭದ್ರತಾ ಯೋಜನೆಯ ಎಲ್ಲ ಫಲಾನುಭವಿಗಳಿಗೆ ಬ್ಯಾಂಕ್‌ ಖಾತೆಯ ಮೂಲಕ ನೇರ ಹಣ ವರ್ಗಾವಣೆ ಆಗುವಂತೆ ಅ ಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಕಡ್ಡಾಯವಾಗಿ ಆಧಾರ್‌ ಲಿಂಕ್‌ ಮಾಡಬೇಕು. ಆಧಾರ್‌ ಲಿಂಕ್‌ ಮಾಡಿದಾಗ ಮಾತ್ರ ಅನರ್ಹರು ಪಿಂಚಣೆ ಪಡೆಯುವುದು ನಿಂತು ಇದರಿಂದ ಸರ್ಕಾರಕ್ಕೆ ಹಣದ ಉಳಿತಾಯವಾಗುತ್ತದೆ. ಶೇ 100 ರಷ್ಟು ಆಧಾರ್‌ ಲಿಂಕ್‌ ಕಡ್ಡಾಯವಾಗಿ ಮಾಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಜಾತಿಯ ತಾರತಮ್ಯವಿಲ್ಲದೆ ಪ್ರತಿ ಹಳ್ಳಿಗಳಿಗೂ ಸ್ಮಶಾನ ಇರಬೇಕು ಎನ್ನುವುದು ಸರ್ಕಾರದ ಪಾಲಿಸಿಯಾಗಿದ್ದು, ಸಾರ್ವಜನಿಕ ಸ್ಮಶಾನ ಎಲ್ಲರಿಗೂ ಒಂದೇ ಸ್ಮಶಾನ ಇರಬೇಕು. ಈ ನಿಟ್ಟಿನಲ್ಲಿ ಎಲ್ಲ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು. ಗೋಮಾಳವಾದರೆ ಜಿಲ್ಲಾಧಿಕಾರಿ ಅನುಮೋದನೆ ನೀಡುವರು. ಖರಾಬು ಜಮೀನು ಆಗಿದ್ದಲ್ಲಿ ಸರ್ಕಾರಕ್ಕೆ ಕಳುಹಿಸಿಕೊಡಬೇಕು. ಸರ್ಕಾರಕ್ಕೆ ಬಂದ ನಂತರ ಜಿಲ್ಲೆಯ ಎಲ್ಲ ಕಡತಗಳನ್ನು ಒಂದೇ ದಿನ ಅನುಮೋದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಸಕರಾದ ಟಿ.ರಘುಮೂರ್ತಿ, ಪೂರ್ಣಿಮಾ ಶ್ರೀನಿವಾಸ್‌, ಗೂಳಿಹಟ್ಟಿ ಡಿ.ಶೇಖರ್‌, ಜಿ.ಹೆಚ್‌.ತಿಪ್ಪಾರೆಡ್ಡಿ, ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ ಬಾಬು, ಜಿಲ್ಲಾಕಾರಿ ಆರ್‌.ವಿನೋತ್‌ ಪ್ರಿಯಾ, ಜಿಪಂ ಸಿಇಒ ಹೊನ್ನಾಂಬ ಮತ್ತಿತರರಿದ್ದರು .

ಹಕ್ಕುಪತ್ರ ವಿತರಣೆಗೆ ಸೂಚನೆ
ಬಗರ್‌ಹುಕುಂ ಸಮಿತಿ ಅಸ್ತಿತ್ವದಲ್ಲಿದ್ದು, ಸಾಕಷ್ಟು ಭೂ ಮಂಜೂರಾತಿ ಅರ್ಜಿಗಳು ಬಾಕಿ ಇವೆ. ಸಮಿತಿಯಲ್ಲಿ ಚರ್ಚೆಯಾಗಿ ಈಗಾಗಲೇ ಪರಿಶೀಲಿಸಲಾಗಿದ್ದು, ಸಮಿತಿ ಅನುಮೋದನೆ ನೀಡಿರುವ ಅರ್ಜಿದಾರರಿಗೆ ಶೀಘ್ರವಾಗಿ ಹಕ್ಕುಪತ್ರ ಮಂಜೂರು ಮಾಡಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಶಾಸಕರಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್‌ಗಳಿಗೆ ಸಚಿವ ಅಶೋಕ್‌ ಸೂಚಿಸಿದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.