ಕೋವಿಡ್ ಪತ್ತೆ ಲ್ಯಾಬ್: ಸಿಯುಸಿ ಆಯ್ಕೆ
Team Udayavani, May 28, 2020, 5:19 PM IST
ಸಾಂದರ್ಭಿಕ ಚಿತ್ರ
ಕಲಬುರಗಿ: ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ಪತ್ತೆ ಪ್ರಯೋಗಾಲಯ ಸ್ಥಾಪನೆಗೆ ಆಳಂದ ತಾಲೂಕಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯ (ಸಿಯುಕೆ) ಆಯ್ಕೆಯಾಗಿದೆ ಎಂದು ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ತಿಳಿಸಿದ್ದಾರೆ.
ಕೋವಿಡ್ ಮಹಾಮಾರಿ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಯೋಗಾಲಯಗಳ ಪಾತ್ರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಸೌಲಭ್ಯಗಳು ಕುರಿತು ಪ್ರಸ್ತಾವ ಸಲ್ಲಿಸುವಂತೆ ದೇಶದ ಎಲ್ಲ ಕೇಂದ್ರೀಯ ವಿವಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸೂಚಿಸಿತ್ತು. ಇದರಲ್ಲಿ ಆಯ್ಕೆಯಾದ ಕೆಲವೇ ಕೆಲ ವಿವಿಗಳಲ್ಲಿ ಸಿಯುಕೆ ಒಂದಾಗಿದೆ ಎಂದಿದ್ದಾರೆ.
ವಿವಿಯ ಸ್ಕೂಲ್ ಆಫ್ ಲೈಫ್ ಸೈನ್ಸ್ ವಿಭಾಗದಲ್ಲಿ ಐಸಿಎಂಆರ್ ಅನುಮೋದಿತ 2ನೇ ಮಟ್ಟದ 1.5 ಕೋಟಿ ರೂ. ವೆಚ್ಚದ ಅತ್ಯಾಧುನಿಕ ಉಪಕರಣಗಳು ಹೊಂದಿದೆ. ಐಸಿಎಂಆರ್ ಮಾರ್ಗಸೂಚಿ ಅನ್ವಯ ಲ್ಯಾಬ್ ಸ್ಥಾಪನೆಯಾಗಲಿದೆ. ಇದು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಂಶೋಧನೆ ಮತ್ತು ತರಬೇತಿ ಕೇಂದ್ರವಾಗಲಿದೆ ಎಂದು ಹೇಳಿದ್ದಾರೆ.
ರಸಾಯನಶಾಸ್ತ್ರ ವಿಭಾಗದ ಹ್ಯಾಂಡ್ ಸ್ಯಾನಿಟೈಸರ್ ಮತ್ತು ಸೋಂಕು ನಿವಾರಕಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಆಡಳಿತ ಮತ್ತು ಶೈಕ್ಷಣಿಕ ಸಿಬ್ಬಂದಿ ಎಲ್ಲ ಸುರಕ್ಷತೆ ಮತ್ತು ಆರೋಗ್ಯ ಸೌಲಭ್ಯಕ್ಕೆ ಅನುಕೂಲವಾಗಲಿದೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.