ಕೋವಿಡ್ ಎದುರಿಸಿ ಬದುಕುವುದನ್ನು ರೂಢಿಸಿಕೊಳ್ಳಿ: ಸಚಿವೆ ಜೊಲ್ಲೆ ಸಲಹೆ
Team Udayavani, May 28, 2020, 5:54 PM IST
ಸಾಂದರ್ಭಿಕ ಚಿತ್ರ
ವಿಜಯಪುರ: ಜಗತ್ತನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೋವಿಡ್ ಮದ್ದಿಲ್ಲದ ರೋಗವಾಗಿ ಜೀವಹಾನಿ ಮಾಡುತ್ತಿದೆ. ಹೀಗಾಗಿ ಭಾರತೀಯ ಪಾರಂಪರಿಕ ಮನೆಮದ್ದು ಸೇವಿಸುವ ಮೂಲಕ ರೋಗನಿರೋಧ ಶಕ್ತಿ ವೃದ್ಧಿಸಿಕೊಳ್ಳಲು ಮುಂದಾಗಬೇಕು. ಆ ಮೂಲಕ ಕೋವಿಡ್ ಜತೆ ಬದುಕುವುದನ್ನು ಕಲಿಯಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋವಿಡ್ ರೋಗ ಎದುರಿಸುವ ಕುರಿತು ಇಡೀ ವಿಶ್ವವೇ ವಿವಿಧ ಪ್ರಯೋಗ ನಡೆಸಿದೆ. ಆದರೆ, ಸದರಿ ರೋಗಕ್ಕೆ ನಿರ್ಧಿಷ್ಟ ಔಷಧಿ ಈ ವರೆಗೆ ಕಂಡು ಹಿಡಿದಿಲ್ಲ. ಹೀಗಾಗಿ ಸೋಂಕು ಹರಡುವಿಕೆ ತಡೆಯುವುದು ಸೇರಿದಂತೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ವಿಧಾನಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದರು.
ಹೆಚ್ಚು ಚಹಾ ಸೇವಿಸುವ ಅಭ್ಯಾಸ ಇದ್ದ ನಾನು ಕೋವಿಡ್ ರೋಗ ಸೃಷ್ಟಿಯಾದ ಬಳಿಕ ಅರಿಶಿಣ ಬೆರೆಸಿದ ಬಿಸಿನೀರು ಸೇವಿಸುವುದನ್ನು ರೂಢಿಸಿಕೊಂಡಿದ್ದೇನೆ. ಅರಿಶಿಣ ಸೇರಿದಂತೆ ಭಾರತೀಯ ಪಾರಂಪರಿಕ ವೈದ್ಯಕೀಯ ವ್ಯವಸ್ಥೆಯಲ್ಲಿ ರೋಗಕ್ಕೆ ಮದ್ದು ಕಂಡು ಹಿಡಿಯುವ ಬದಲು ಮನುಷ್ಯನಲ್ಲೇ ರೋಗ ನಿರೋಧಕ ಶಕ್ತಿ ವೃದ್ಧಿಸುವ ವಿಧಾನಗಳನ್ನು ಹೇಳಲಾಗಿದೆ. ಇದರಲ್ಲಿ ಅರಿಶಿಣ ಮಿಶ್ರಿತ ಬಿಸಿನೀರು ಸೇವನೆಯೂ ಒಂದು. ಇಂಥ ಮನೆ ಮದ್ದು ಹಾಗೂ ಪಾರಂಪರಿಕ ವೈದ್ಯಕೀಯದಲ್ಲಿರುವ ವಿಧಾನಗಳನ್ನು ಬಳಸಿಕೊಂಡು ರೋಗ ನಿಗ್ರಹಕ್ಕಿಂತ, ವ್ಯಕ್ತಿಗಳಲ್ಲೇ ರೋಗ ನಿರೋಧಕ ಶಕ್ತಿ ವೃದ್ಧಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.