ಪಾಲಿಕೆ ವ್ಯಾಪ್ತಿ ಆಸ್ತಿ ತೆರಿಗೆ ಶೇ.5 ರಿಯಾಯಿತಿ
Team Udayavani, May 29, 2020, 7:03 AM IST
ತುಮಕೂರು: ಕೊರೊನಾ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ಯನ್ನು ನೀಡಿ ಸರ್ಕಾರ ಆದೇಶ ನೀಡಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಮೇಯರ್ ಫರೀದಾಬೇಗಂ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ತಿ ತೆರಿಗೆ ಪಾವತಿಗೆ ಮೇ ಅಂತ್ಯ ದವರೆಗೆ ಅವಕಾಶ ನೀಡಲಾಗಿತ್ತು, ಈಗ ಅದನ್ನು ಜುಲೈ ಅಂತ್ಯದವರೆಗೆ ತೆರಿಗೆ ಪಾವ ತಿಗೆ ಅವಕಾಶ ನೀಡಿದ್ದು, ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸರ್ಕಾರಕ್ಕೆ ಮನವಿ: ಪ್ರತಿ ಮೂರು ವರ್ಷಕ್ಕೆ ಆಸ್ತಿ ತೆರಿಗೆ ಹೆಚ್ಚಳವಾಗಬೇಕಿದ್ದು ಅದರಂತೆ ಸ್ಥಾಯಿ ಸಮಿತಿ ಅಧ್ಯಕ್ಷರೊಂದಿಗೆ ಚರ್ಚಿಸಿ ಒಪ್ಪಿಕೊಂಡಿದ್ದೇವೆ. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸದಸ್ಯರು ಒತ್ತಾಯ ಮಾಡಿದ್ದರು. ಶಾಸಕರು, ಸಂಸದರು ಈ ಬಗ್ಗೆ ಮಾತನಾಡುವ ಭರವಸೆ ನೀಡಿದ್ದರು, ಶೇ.15ರಷ್ಟು ತೆರಿಗೆ ಹೆಚ್ಚಳವನ್ನು ಮುಂದೂಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಸರ್ಕಾರದಿಂದ ಸೌಲಭ್ಯ ಸಿಕ್ಕಿಲ್ಲ: ತುಮಕೂರು ನಗರದಲ್ಲಿ ಸೀಲ್‌ಡೌನ್ ಪ್ರದೇಶಕ್ಕೆ ಯಾವುದೇ ಸೌಲಭ್ಯ ನೀಡಿಲ್ಲ, ಅಲ್ಲಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ ಅಲ್ಲಿರುವವರಿಗೆ ಕನಿಷ್ಠ ಊಟವನ್ನು ಪೂರೈಕೆ ಮಾಡಲಿಲ್ಲ ಈ ವರೆಗೆ ಸರ್ಕಾರದಿಂದ ಪಾಲಿಕೆಗೆ ಯಾವುದೇ ಸೌಲಭ್ಯ ದೊರಕಿಲ್ಲ ಎಂದು ಆರೋಪಿಸಿದರು.
ಸ್ಪಂದಿಸದ ಆಯುಕ್ತರು: ಕೊರೊನಾದ ಕಾರಣದಿಂದಾಗಿ ಅಧಿಕಾರಿಗಳಿಗೆ ಪಾಲಿಕೆ ಸದಸ್ಯರು ಸಹಕಾರ ನೀಡುತ್ತಿದ್ದಾರೆ ಆದರೆ ಆಯುಕ್ತರಿಗೆ ಮೇಯರ್ ಕರೆ ಮಾಡಿದರೂ ಪ್ರತಿಕ್ರಿಯಿಸುವುದಿಲ್ಲ ಇದರಿಂದಾಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದರು. ಉಪ ಮೇಯರ್ ಶಶಿಕಲಾ, ಮಹೇಶ್, ಕುಮಾರ್, ಇನಾಯತ್‌ವುಲ್ಲಾಖಾನ್ ಇದ್ದರು.
ಪಾಲಿಕೆಗೆ ಅನುದಾನ ಬಂದಿಲ್ಲ: ನಗರದಲ್ಲಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸೀಲ್‌ಡೌನ್ ಮಾಡಿರುವ ಪ್ರದೇಶದಲ್ಲಿ ವಾಸಿಸುವವರಿಗೆ ದುಡಿಮೆ ಇಲ್ಲ, ಅಲ್ಲಿರುವವರಿಗೆ ಅಗತ್ಯ ಸೌಲಭ್ಯಗಳನ್ನು ನೀಡದೇ ಹೋದರೆ ಜೀವನ ನಡೆಸುವುದು ಹೇಗೆ? ದುಡಿಮೆ ಇಲ್ಲದ ಮೇಲೆ ಜನರು ಬದುಕುವುದು ಹೇಗೆ ಪ್ರಶ್ನಿಸಿರುವ ಮೇಯರ್, ಜನರು ಸುಮ್ಮನೆ ಜನಪ್ರತಿನಿಧಿಗಳ ಮೇಲೆ ಆರೋಪಿಸುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಯಾವುದೇ ಅನುದಾನವನ್ನು ಪಾಲಿಕೆಗೆ ಮಾತ್ರ ಅಲ್ಲ, ಜಿಲ್ಲಾಡಳಿತಕ್ಕೂ ನೀಡಿಲ್ಲ ಎಂದು ಮೇಯರ್ ಹೇಳಿದರು.
ಆಯುಕ್ತರು ಪಾಲಿಕೆಯಲ್ಲಿ ಹೆಚ್ಚಾಗಿ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಕೆಳಹಂತದ ಅಧಿಕಾರಿಗಳು ಸಮಯ ವ್ಯರ್ಥ ಮಾಡುತ್ತಿದ್ದು, ಪಾಲಿಕೆ ಆಡಳಿತ ಸರಾಗವಾಗಿಲ್ಲ. ಸ್ಲಂಗಳಲ್ಲಿ ಯುಜಿಡಿ ಕೆಲಸ ನಡೆಯುತ್ತಿಲ್ಲ. ಪಾಲಿಕೆ ಸದಸ್ಯರು ಸಂಪರ್ಕಿಸಿದರೂ ಆಯುಕ್ತರು ಸಿಗುತ್ತಿಲ್ಲ.
-ಫರೀದಾ ಬೇಗಂ, ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.