ಕೇಂದ್ರದ ವಿರುದ್ಧ ಕಾಂಗ್ರೆಸ್ ಆನ್ಲೈನ್ ಪ್ರತಿಭಟನೆ
Team Udayavani, May 29, 2020, 8:29 AM IST
ಮುಂಬಯಿ, ಮೇ 28: ಪಕ್ಷದ ಮುಖಂಡ ರಾಹುಲ್ ಗಾಂಧಿ ಈ ಹಿಂದೆ ಪ್ರಸ್ತಾಪಿಸಿದ ನ್ಯಾಯ್ ಯೋಜನೆಗೆ ಅನುಗುಣವಾಗಿ ಬಡವರಿಗೆ ಕೇಂದ್ರದಿಂದ ಸಹಾಯವನ್ನು ಕೋರಿ ಮಹಾರಾಷ್ಟ್ರ ಕಾಂಗ್ರೆಸ್ ಆನ್ಲೈನ್ ಪ್ರತಿಭಟನೆ ನಡೆಸಿತು.
ರಾಜ್ಯ ಘಟಕದ ಮುಖ್ಯಸ್ಥ ಬಾಳಸಾಹೇಬ್ ಥೋರಟ್ ಅವರ ನೇತೃತ್ವದಲ್ಲಿ ನಡೆದ ಸ್ಪೀಕ್ ಅಪ್ ಇಂಡಿಯಾ ಹೆಸರಿನ ಈ ಆನ್‌ಲೈನ್ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಯೂಟ್ಯೂಬ್, ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ಗಳನ್ನು ಬಳಸಿ ಕೇಂದ್ರ ಸರಕಾರದ ವಿರುದ್ಧ ಟೀಕಾ ದಾಳಿ ನಡೆಸಿದರು. ಆರಂಭದಲ್ಲಿ ಬಡ ಕುಟುಂಬಕ್ಕೆ 10,000 ರೂ. ಮತ್ತು ಮುಂದಿನ ಆರು ತಿಂಗಳವರೆಗೆ ತಿಂಗಳಿಗೆ 7,500 ರೂ.ಗಳನ್ನು ನೀಡುವಂತೆ ಅವರು ಕೇಂದ್ರವನ್ನು ಒತ್ತಾಯಿಸಿದರು. ಪಕ್ಷದ ಕೇಂದ್ರ ನಾಯಕತ್ವದ ಸೂಚನೆಯ ಮೇರೆಗೆ ಈ ಆಂದೋಲನವನ್ನು ನಡೆಸಲಾಯಿತು ಎಂದು ಥೋರಟ್ ಹೇಳಿದ್ದಾರೆ.
ಕೋವಿಡ್ ವೈರಸ್ ಪ್ರೇರಿತ ಲಾಕ್ ಡೌನ್ನಿಂದಾಗಿ ಉದ್ಭವವಾಗಿರುವ ಆರ್ಥಿಕ ಬಿಕ್ಕಟ್ಟಿನಿಂದ ಹೆಚ್ಚು ಹಾನಿಗೊಳಗಾದ ಬಡವರಿಗೆ ಹಣವನ್ನು ನೀಡುವುದರಿಂದ ಅವರಿಗೆ ಖರೀದಿ ಮಾಡಲು ಸಾಧ್ಯವಾಗುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ಅಭಿಪ್ರಾಯಪಟ್ಟಿದ್ದಾರೆ. ಕಳೆದ ವರ್ಷ ಲೋಕಸಭಾ ಚುನಾವಣೆಗೆ ಮೊದಲು ರಾಹುಲ್ ಗಾಂಧಿ ನ್ಯಾಯ್ ಯೋಜನೆಯನ್ನು ಪ್ರಸ್ತಾಪಿಸಿದ್ದರು. ಈ ಯೋಜನೆಯಡಿ ಬಡವರಿಗೆ ತಿಂಗಳಿಗೆ ಒಂದು ನಿರ್ದಿಷ್ಟ ಮೊತ್ತವನ್ನು ಪಾವತಿಸಲಾಗುವುದು ಎಂದು ಅವರು ಪ್ರಸ್ತಾಪಿಸಿದ್ದರು.
ಬಡವರ ಕೊಳ್ಳುವ ಸಾಮರ್ಥ್ಯವು ಕಾರ್ಖಾನೆಗಳ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಉದ್ಯೋಗಗಳ ಸೃಷ್ಟಿಗೂ ಕಾರಣವಾಗಲಿದೆ ಎಂದು ಗಾಂಧಿ ಹೇಳಿದ್ದಾರೆ. ಸಾಮಾನ್ಯ ಜನರು ಕೋವಿಡ್ ವೈರಸ್ ಬಿಕ್ಕಟ್ಟಿನಿಂದ ಹೆಚ್ಚು ಹಾನಿಗೊಳಗಾಗಿದ್ದಾರೆ. ಯಾವುದೇ ಆದಾಯದ ಮೂಲವಿಲ್ಲದೆ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ ಎಂದು ಮಹಾರಾಷ್ಟ್ರದ ಕಂದಾಯ ಸಚಿವರಾಗಿರುವ ಥೋರಟ್ ನುಡಿದಿದ್ದಾರೆ.
ಈ ಸಮಯದಲ್ಲಿ ನಾವು ಹೆಚ್ಚು ನೆನಪಿಸಿಕೊಳ್ಳುತ್ತಿರುವುದು ರಾಹುಲ್ ಜಿ ಅವರು ಪ್ರಸ್ತಾಪಿಸಿದ ನ್ಯಾಯ ಯೋಜನೆ. ನಾವು ಆರ್ಥಿಕತೆಗೆ ಆವೇಗವನ್ನು ನೀಡಲು ಬಯಸಿದರೆ ನಾವು ಬಡವರಿಗೆ ಸ್ವಲ್ಪ ಹಣವನ್ನು ನೀಡಬೇಕು. ಹಾಗಾಗಿ, ಕೇಂದ್ರವು ಈ ಪ್ರಸ್ತಾಪಿತ ಯೋಜನೆಗೆ ಅನುಗುಣವಾಗಿ ಬಡವರಿಗೆ ವಿತ್ತೀಯ ನೆರವು ನೀಡಬೇಕು ಎಂದವರು ಫೇಸ್‌ಬುಕ್ ಲೈವ್ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಂಡಾಗ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.