ಲಾಕ್‌ಡೌನ್ ಸಂಕಷ್ಟ; ಆಸ್ತಿ ತೆರಿಗೆ ಹೆಚ್ಚಳಕ್ಕೆ ಜನಜಾಗೃತಿ ವೇದಿಕೆ ವಿರೋಧ
Team Udayavani, May 29, 2020, 10:38 AM IST
ಬಾಗಲಕೋಟೆ: ಸ್ವಯಂ ಘೋಷಿತ ಆಸ್ತಿ ತೆರಿಗೆ (ಎಸ್‌ಎಎಸ್) ಪದ್ಧತಿ ಅನುಸಾರ ಶೇ. 5ರ ರಿಯಾಯಿತಿ ಸಹಿತ ತೆರಿಗೆ ಪಾವತಿ ದಿನಾಂಕವನ್ನು ಪೌರಾಡಳಿತ ಇಲಾಖೆ ಮೇ 31ರವರೆಗೆ ವಿಸ್ತರಿಸಿದ್ದು, ಅದನ್ನು ಡಿಸೆಂಬರ್ 31ರವರೆಗೆ ವಿಸ್ತರಿಸುವಂತೆ ಹುನಗುಂದದ ನಾಗರಿಕ ಸೇವಾ ಸಮಿತಿ ಹಾಗೂ ಇಳಕಲ್ಲದ ಜನ ಜಾಗೃತಿ ವೇದಿಕೆ ಒತ್ತಾಯಿಸಿವೆ.
ಎರಡೂ ಸಮಿತಿಗಳ ಪದಾಧಿಕಾರಿಗಳು ಗುರುವಾರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಆಸ್ತಿ ತೆರಿಗೆ ಹೆಚ್ಚಳದ ನಿರ್ಧಾರವನ್ನು ಸರ್ಕಾರ 1ನೇ ಹಂತದ ಲಾಕ್‌ಡೌನ್ ಗಮನದಲ್ಲಿಟ್ಟುಕೊಂಡು ನಿರ್ಧಾರ ಮಾಡಿತ್ತು. ಕೋವಿಡ್ ಭೀಕರತೆ ದಿನೆ ದಿನೇ ಹೆಚ್ಚಾಗುತ್ತಿದ್ದು, ಮುಂದೇನೆಂಬ ಆತಂಕ ಎಲ್ಲರನ್ನೂ ಕಾಡುತ್ತಿದೆ. ಇದರಿಂದ ಎಲ್ಲ ವರ್ಗಗಳ ಜನರು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಈ ಹಂತದಲ್ಲಿ ಸರ್ಕಾರ ತೆರಿಗೆದಾರರಿಗೆ ಸೂಕ್ತ ರಿಯಾಯ್ತಿ ಕೊಡಬೇಕು ಎಂದು ಆಗ್ರಹಿಸಿದರು.
ಇಳಕಲ್ ನಗರಸಭೆ ಶೇ. 20 ಮತ್ತು ಹುನಗುಂದ ಪುರಸಭೆ ಶೇ. 25ತೆರಿಗೆ ಹೆಚ್ಚಳ ಈಗಾಗಲೇ ಪ್ರಕಟಿಸಿವೆ. ಸದ್ಯದ ಪರಿಸ್ಥಿತಿಯಲ್ಲಿ ಇದು ಜನರಿಗೆ ಮತ್ತಷ್ಟು ಹೊರೆಯಾಗಿದೆ. ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ, 2020-2021ನೇ ಆರ್ಥಿಕ ವರ್ಷಕ್ಕೆ ತೆರಿಗೆ ಹೆಚ್ಚಳದ ಕ್ರಮ ಕೈಬಿಡಬೇಕು. ಈ ವರ್ಷದ ಆಸ್ತಿ ತೆರಿಗೆ ಪಾವತಿಗಾಗಿ ಡಿ.31ರವರೆಗೆ ವಿಸ್ತರಣೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಸಂಘಟನೆಗಳ ಪ್ರಮುಖರಾದ ನಾಗರಾಜ ಹೊಂಗಲ್, ವಕೀಲ ವಿ.ಆರ್ ಜನಾದ್ರಿ, ಜಿ.ಬಿ ಕಂಬಾಳಿಮಠ, ಕೃಷ್ಣ ಜಾಲಿಹಾಳ, ಮಲ್ಲು ಮಡಿವಾಳರ, ಉಮೇಶ ಕೆಂಭಾವಿಮಠ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.