ನಮ್ಮ ಆರೋಗ್ಯ ನಾವೇ ಕಾಪಾಡಿಕೊಳ್ಳಬೇಕು: ಶೋಭಾ


Team Udayavani, May 29, 2020, 1:21 PM IST

29-May-11

ಶೃಂಗೇರಿ: ಪಪಂ ಸಭಾಂಗಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಕೋವಿಡ್‌-19 ಸಭೆ ನಡೆಸಿದರು

ಶೃಂಗೇರಿ: ಕೋವಿಡ್ ಹಂತಹಂತವಾಗಿ ಹರಡುತ್ತಿರುವದರಿಂದ ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳಬೇಕಾಗಿದೆ. ಇದಕ್ಕಾಗಿ ಸರಕಾರ ವಿಧಿಸಿರುವ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಪಪಂ ಸಭಾಂಗಣದಲ್ಲಿ ಗುರುವಾರ ನಡೆದ ಕೋವಿಡ್‌-19 ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೀಗ ಸರಕಾರ ಹೊಸ ನಿಯಮವನ್ನು ಜಾರಿಗೆ ತಂದಿದ್ದು, ಅದರಂತೆ 7 ದಿನ ಸರಕಾರಿ ವಸತಿ ನಿಲಯದಲ್ಲಿ ಕ್ವಾರಂಟೈನ್‌ ಹಾಗೂ 7 ದಿನ ಮನೆಯಲ್ಲಿ ಕ್ವಾರಂಟೈನ್‌
ಮಾಡಲಾಗುತ್ತಿದೆ. ಕ್ವಾರಂಟೈನ್‌ ಮಾಡಿದ ವ್ಯಕ್ತಿಗಳ ಗಂಟಲು ದ್ರವವನ್ನು 5ನೇ ದಿನಕ್ಕೆ ಪ್ರಯೋಗಾಲಯಕ್ಕೆ ಕಳಿಸಿ ಪರೀಕ್ಷೆ ಮಾಡಲಾಗುತ್ತಿದೆ ಎಂದರು.

ದೇಶಕ್ಕೆ ಆರ್ಥಿಕ ನಷ್ಟ ಉಂಟಾಗುತ್ತಿದ್ದರೂ ಕೋವಿಡ್ ನಿಂದ ಸಾರ್ವಜನಿಕರ ರಕ್ಷಣೆಗಾಗಿ ಸರಕಾರ ಲಾಕ್‌ಡೌನ್‌ ಮಾಡಿದೆ. ಇದರಿಂದ ಸಾವಿನ ಪ್ರಕರಣ ಕಡಿಮೆಯಾಗಿದೆ. ಸರಕಾರ ಆರೋಗ್ಯ ಇಲಾಖೆಗೆ ಕೊರೊನಾ ನಿಯಂತ್ರಣಕ್ಕಾಗಿ ಸಾಕಷ್ಟು ಅನುದಾನ ನೀಡುತ್ತಿದೆ. ಕಾಯಿಲೆ ಇನ್ನೂ ಹೆಚ್ಚುತ್ತಿದ್ದು, ಸಾರ್ವಜನಿಕರು ಹೆಚ್ಚು ಜಾಗೂರಕರಾಗಿರಬೇಕು ಎಂದರು.

ಆರೋಗ್ಯ ಇಲಾಖೆ ಡಾ| ಮಂಜುನಾಥ್‌ ಮಾತನಾಡಿ, ಆಸ್ಪತ್ರೆಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮವನ್ನು ಅನುಸರಿಸಲಾಗುತ್ತಿದೆ. ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಸೌಲಭ್ಯವಿದೆ. ಔಷಧ ದಾಸ್ತಾನು ಸಾಕಷ್ಟಿದೆ ಎಂದರು. ಆಹಾರ ಇಲಾಖೆಯ ನಾಗೇಶ್‌ ಮಾತನಾಡಿ, ಬಿಪಿಎಲ್‌ ಪಡಿತರದಾರರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ವತಿಯಿಂದ ಎರಡು ತಿಂಗಳ ಪಡಿತರ ನೀಡಲಾಗಿದೆ ಎಂದರು.

ಶಿಶು ಮತ್ತು ಮಹಿಳಾ ಕಲ್ಯಾಣ ಇಲಾಖಾಧಿಕಾರಿ ಮಾತನಾಡಿ, ಗರ್ಭಿಣಿಯರಿಗೆ ಆರೋಗ್ಯ ಸುರಕ್ಷತೆ ಮತ್ತು ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದರು. ವೃತ್ತ ನಿರೀಕ್ಷಕ ಸಿದ್ದರಾಮಯ್ಯ ಮಾತನಾಡಿ, ತಾಲೂಕು ಗಡಿಯಲ್ಲಿ ಎರಡು ತನಿಖಾ ಕೇಂದ್ರವಿದ್ದು, ಮಾಸ್ಕ್ ಕಡ್ಡಾಯವಾಗಿದೆ. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತಿದೆ ಎಂದರು.

ಜಿಪಂ ಸದಸ್ಯೆ ಶಿಲಾ ರವಿ ಮಾತನಾಡಿ, ಕ್ವಾರಂಟೈನ್‌ ಕೇಂದ್ರದಲ್ಲಿ ಸ್ವತ್ಛತೆ ಕೊರತೆ ಇದೆ. ಗ್ರಾಪಂ ಸ್ವತ್ಛತೆ ಬಗ್ಗೆ ಹೆಚ್ಚು ಗಮನ ಹರಿಸಬೇಕೆಂದರು. ಶಾಸಕ ಟಿ.ಡಿ.ರಾಜೇಗೌಡ, ಜಿಪಂ ಸದಸ್ಯ ಬಿ.ಶಿವಶಂಕರ್‌, ತಹಶೀಲ್ದಾರ್‌ ಅಂಬುಜಾ, ಇಒ ಸುದೀಪ್‌, ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.