ಕಪ್ಪತ್ತಗುಡ್ಡ ರಕ್ಷಣೆಗೆ ಹೋರಾಡಲೂ ಸಿದ್ಧ


Team Udayavani, May 29, 2020, 2:10 PM IST

ಕಪ್ಪತ್ತಗುಡ್ಡ ರಕ್ಷಣೆಗೆ ಹೋರಾಡಲೂ ಸಿದ್ಧ

ಲಕ್ಷ್ಮೇಶ್ವರ: ಉತ್ತರ ಕರ್ನಾಟಕದ ಸಹ್ಯಾದ್ರಿ ಪರ್ವತ ಎಂದೇ ಪ್ರಸಿದ್ಧವಾಗಿರುವ ಜಿಲ್ಲೆಯ ಕಪ್ಪತ್ತಗುಡ್ಡದ ರಕ್ಷಣೆಗಾಗಿ ಹೋರಾಟ ನಡೆಸಲು ಕಾಂಗ್ರೆಸ್‌ ಪಕ್ಷ ಸದಾ ಸಿದ್ಧವಾಗಿದೆ ಎಂದು ಕೆಪಿಸಿಸಿ ನಿಯೋಜಿತ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಅಬಕಾರಿ ಸಚಿವನಾಗಿದ್ದಾಗ ಒಮ್ಮೆ ಕಪ್ಪತ್ತಗುಡ್ಡಕ್ಕೆಭೇಟಿ ನೀಡಿದ್ದೆ. ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಮಾರು ಹೋಗಿದ್ದೆ. ಹೀಗಾಗಿ ಅರಣ್ಯ ಇಲಾಖೆ ಸಚಿವನಾಗುತ್ತಿದ್ದಂತೆ ವನ್ಯಜೀವಿ ಮಂಡಳಿ ಸಭೆ ಕರೆದು, ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಘೋಷಿಸಿ, ಆದೇಶ ಹೊರಡಿಸಿದ್ದೆ.

ಜಿಲ್ಲೆಯ ಗದಗ, ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕುಗಳಲ್ಲಿ 33 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ  ಕಪ್ಪತ್ತಗುಡ್ಡದ ಹಸಿರು ಸಿರಿ ಮೈಯೊಡ್ಡಿದೆ. ಈ ಪೈಕಿ 24,415.73 ಹೆಕ್ಟೇರ್‌ ಪ್ರದೇಶವನ್ನು ವನ್ಯಜೀವಿಧಾಮ ಎಂದು ಘೋಷಿಸಲಾಗಿದೆ. ವನ್ಯಧಾಮದ ಸುತ್ತಲಿನ ಇಎಸ್‌ಜೆಡ್‌ 10-15 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಗೆ ಅವಕಾಶವಿಲ್ಲ. ಕೆಲ ಪಟ್ಟಭದ್ರರು ಕಪ್ಪತ್ತಗುಡ್ಡದ ವನ್ಯಜೀವಿಧಾಮ ಪ್ರದೇಶದಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ಆರಂಭಿಸಲು ಅನುಕೂಲ ಆಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಿ ಈ ಗುಡ್ಡವನ್ನು ವನ್ಯಜೀವಿಧಾಮದಿಂದ ಮುಕ್ತ ಮಾಡಲು ಶಿಫಾರಸ್ಸು ಮಾಡಿಸುವ ಹುನ್ನಾರ ನಡೆಸುತ್ತಿದ್ದಾರೆ. ಕಪ್ಪತ್ತಗುಡ್ಡದಲ್ಲಿ ಅಪರೂಪದ ಔಷಧ ಸಸ್ಯಗಳೊಂದಿಗೆ ವನ್ಯಜೀವಿಗಳೂ ನೆಲೆಕಂಡಿವೆ.

ಹೀಗಾಗಿ ಕಪ್ಪತ್ತಗುಡ್ಡದ ರಕ್ಷಣೆ ಎಲ್ಲರ ಹೊಣೆಯಾಗಿದ್ದು, ಕಪ್ಪತ್ತಗುಡ್ಡ ಉಳಿಸಲು ಎಂತಹ ಉಗ್ರ ಹೋರಾಟಕ್ಕೂ ಕಾಂಗ್ರೆಸ್‌ ಸದಾ ಸಿದ್ಧ ಎಂದು ಹೇಳಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಿ.ಎಸ್‌. ಪಾಟೀಲ ಮಾತನಾಡಿ, ಲಿಂಗೈಕ್ಯ ತೋಂಟದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್‌ ಹೋರಾಟ ನಡೆದ ಪ್ರತಿಫಲವಾಗಿ ಪೋಕ್ಸೋದಂತಹ ದೈತ್ಯ ಕಂಪನಿಗಳು ಜಿಲ್ಲೆಯಿಂದ ಪಲಾಯನ ಮಾಡಿದ್ದವು. ಆದರೆ ಇದೀಗ ಬಿಜೆಪಿ ಸರ್ಕಾರ ವನ್ಯಜೀವಿಧಾಮದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.