ಜಲಮೂಲ ರಕ್ಷಣೆಗೆ ಆದ್ಯತೆ
Team Udayavani, May 29, 2020, 3:28 PM IST
ಸಾಂದರ್ಭಿಕ ಚಿತ್ರ
ಹೊಳಲ್ಕೆರೆ: ನೂರು ಕೋಟಿ ರೂ. ಅನುದಾನದಲ್ಲಿ ಕ್ಷೇತ್ರದಲ್ಲಿನ ಜಲಮೂಲಗಳ ರಕ್ಷಣೆಗೆ ಆದ್ಯತೆ ನೀಡಿದೆ. ನೀರಿನ ಸಂರಕ್ಷಣೆ ಮಾಡದಿದ್ದಲ್ಲಿ ಜೀವಸಂಕುಲದ ಬದುಕು ದುಸ್ತರವಾಗಲಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ತಾಲೂಕಿನ ಮಲ್ಲಾಡಿಹಳ್ಳಿ-ಶಿವಪುರ ಮಾರ್ಗದಲ್ಲಿ ಹರಿಯುವ ಹಿರೇಹಳ್ಳದ ನೀರು ತಡೆಗಟ್ಟಲು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಬ್ಯಾರೇಜ್ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ಹಿರೇಹಳ್ಳ ರೈತರ ಜೀವನಾಡಿಯಾಗಿದ್ದು, ಮಳೆಗಾಲದಲ್ಲಿ ಸಾಕಷ್ಟು ನೀರು ಹಳ್ಳದಲ್ಲಿ ಹರಿದು ಹೋಗುತ್ತದೆ. ಆ ನೀರಿನ ಬಳಕೆಗೆ ಬ್ಯಾರೇಜ್ ನಿರ್ಮಿಸಲಾಗುತ್ತಿದೆ. ಗಂಗಸಮುದ್ರ, ರಾಮಗಿರಿ, ಹೊಸೂರು, ತಾಳಿಕಟ್ಟೆ, ಹನುಮಲಿ, ದೊಗ್ಗನಾಳ್, ಮಲ್ಲಾಡಿಹಳ್ಳಿ, ಶಿವಪುರ ಭಾಗದಲ್ಲಿ ಹರಿಯುವ ಹಿರೇಹಳ್ಳ ನೂರಾರು ಗ್ರಾಮಗಳ ಮೂಲಕ ಶಾಂತಿಸಾಗರವನ್ನು ಸೇರುತ್ತದೆ. ನೀರಿನ ಸದ್ಬಳಕೆಗೆ ಅಲ್ಲಲ್ಲಿ ಬ್ಯಾರೇಜ್ ನಿರ್ಮಾಣ ಮಾಡಿ ನೀರು ನಿಲ್ಲಿಸಲಾಗುತ್ತದೆ. ಇದರಿಂದ ತೋಟಗಾರಿಕೆ ಕೃಷಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಪಿ. ರಮೇಶ್, ತಾಪಂ ಸದಸ್ಯೆ ಗಿರಿಜಾ ಅಜ್ಜಯ್ಯ, ಜಿಪಂ ಮಾಜಿ ಅಧ್ಯಕ್ಷ ಪಿ.ಆರ್. ಶಿವಕುಮಾರ್, ಮುಖಂಡರಾದ ಪರಮೇಶ್ವರಪ್ಪ, ಮರುಳಸಿದ್ಧೇಶ್ವರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.