ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬಿತ್ತು ಅರಣ್ಯ ಇಲಾಖೆ ಬೋನಿಗೆ
Team Udayavani, May 29, 2020, 3:52 PM IST
ತರೀಕೆರೆ: ಅರಣ್ಯ ಇಲಾಖೆ ಇಟ್ಟ ಬೋನಿಗೆ ಬಿದ್ದ ಚಿರತೆ
ತರೀಕೆರೆ: ಅಮೃತಾಪುರ ಬಳಿಯ ವಿಠಲಾಪುರ ಸುತ್ತಮುತ್ತಲಿನ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ.
ಹಲವಾರು ದಿನಗಳಿಂದ ಈ ಭಾಗದಲ್ಲಿ ಬೀಡುಬಿಟ್ಟಿದ್ದ ಚಿರತೆ ಜನ-ಜಾನುವಾರುಗಳಿಗೆ ತೊಂದರೆ ಉಂಟು ಮಾಡಿರಲಿಲ್ಲ. ಆದರೆ ನಾಯಿಗಳನ್ನು ಬೇಟೆಯಾಡುತ್ತಿತ್ತು. ಇದನ್ನರಿತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಠಲಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬೋನು ಇರಿಸಲಾಗಿತ್ತು. ಇದೀಗ ಬೋನಿಗೆ ಚಿರತೆ ಬಿದ್ದಿರುವುದರಿಂದ ಅಮೃತಾಪುರ ಹೋಬಳಿ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.
ಕತ್ತಲಾಗುತ್ತಿದ್ದಂತೆ ಗ್ರಾಮಗಳತ್ತ ಮುಖ ಮಾಡುತ್ತಿದ್ದ ಚಿರತೆ ಸಾಕು ಪ್ರಾಣಿಗಳನ್ನು ಹೊತ್ತೂಯುತ್ತಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಸಮತಳ, ಕುಂಟಿನಮಡು, ನೇರಲಕೆರೆ, ಅಮೃತಾಪುರ, ನಾಗೇನಹಳ್ಳಿ ಭಾಗದಲ್ಲಿ ಚಿರತೆ ಸಂಚರಿಸುತ್ತಿತ್ತೆಂದು ಗ್ರಾಮಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.