ಬಿಜೆಪಿ ಸರ್ಕಾರದ ಪತನ ಹಗಲು ಗನಸು: ಅಶ್ವತ್ಥನಾರಾಯಣ
Team Udayavani, May 29, 2020, 9:31 PM IST
ರಾಮನಗರ: ಬಿಜೆಪಿ ಶಾಸಕರೇ ಸರ್ಕಾರವನ್ನು ಉರುಳಿಸುತ್ತಾರೆ ಎಂಬ ಹಗಲುಗನಸು ಕಾಣುವುದನ್ನು ಕಾಂಗ್ರೆಸ್ಸಿಗರು ಬಿಡಲಿ ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ನಗರಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅತಿ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂದು ಮಾಗಡಿಯಲ್ಲಿ ಸಂಸದ ಡಿ.ಕೆ.ಸುರೇಶ್ ನೀಡಿದ ಹೇಳಿಕೆಗೆ ಅವರು ತಿರುಗೇಟು ನೀಡಿದರು. ಬಿಜೆಪಿಯಲಿ ಯಾವ ಭಿನ್ನಮತ, ಸಮಸ್ಯೆ ಇಲ್ಲ. ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಿಸಬೇಕು ಎಂಬ ದನಿಯೂ ಇಲ್ಲ ಎಂದರು.
ಕೆಲ ಬಿಜೆಪಿ ಶಾಸಕರು ಸಭೆ ನಡೆಸಿರುವ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು, ಸಭೆ ನಡೆಸುವುದು ತಪ್ಪೇನಿಲ್ಲ. ನಮ್ಮದೇ ಪಕ್ಷದ ಶಾಸಕರು ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಮಾತನಾಡಲು ಬಯಸಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡಲಿದೆ. 2023ರ ನಂತರವೂ ಅಧಿಕಾರಕ್ಕೆ ಬರಲಿದೆ. ಬೇರ್ಯಾವ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗದಂತೆ ಆಡಳಿತ ಕೊಡುತ್ತೇವೆ ಎಂದರು.
ಬಿಜೆಪಿ ಶಾಸಕರು ಶಿಸ್ತಿನ ಸಿಪಾಯಿಗಳು, ಸಂತೋಷ್ ಅವರಿಗೆ ರಾಜಕೀಯ ಕಾರ್ಯದರ್ಶಿ ಸ್ಥಾನ ಮಾನ ಕೊಡುವುದು ಮುಖ್ಯಮಂತ್ರಿಗಳಿಗೆ ಅಧಿಕಾರವಿದೆ. ಸಂತೋಷ್ ಅವರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ಮುಖ್ಯಮಂತ್ರಿಗಳು ಪರಿಗಣಿಸಿದ್ದಾರೆ. ಹಾಗಂತ ಉಳಿದವರು ಕಳಪೆ ಎಂದೇನಿಲ್ಲ. ಅರ್ಹರೆಲ್ಲರಿಗೂ ಸ್ಥಾನಮಾನ ಕೊಡಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.