ಮೈಷುಗರ್ ಸಾಧಕ-ಬಾಧಕಗಳ ಚರ್ಚಿಸಿ ನಿರ್ಧಾರ
Team Udayavani, May 30, 2020, 5:18 AM IST
ಮಂಡ್ಯ: ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮೈಸೂರು ಸಕ್ಕರೆ ಕಾರ್ಖಾನೆ ಪುನಶ್ಚೇತನ ಕುರಿತು ಚರ್ಚಿಸಿದರು.
ಐತಿಹಾಸಿಕ ಮಹತ್ವವುಳ್ಳ ಮಂಡ್ಯದ ಮೈಷುಗರ್ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಯಬೇಕು ಹಾಗೂ ಜಿಲ್ಲೆಯ ರೈತರನ್ನು ಕಾಪಾಡಬೇಕು ಎಂದು ಶಾಸಕರು ಹಾಗೂ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.
ಸರ್ಕಾರ ಬದ್ಧ: ಮೈಷುಗರ್ ಸಕ್ಕರೆ ಕಾರ್ಖಾನೆನ್ನು ಪುನಶ್ಚೇತನಗೊಳಿಸಲು ಸರ್ಕಾರ ಬದ್ಧವಾಗಿದ್ದು, ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸುವ ಹಾಗೂ ಸರ್ಕಾರವೇ ಕಾರ್ಖಾನೆಯನ್ನು ಸಂಪೂರ್ಣ ನಿರ್ವಹಣೆ ಮಾಡುವುದರ ಸಾಧಕ-ಬಾಧಕಗಳ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಕಾರ್ಮಿಕ ಸಚಿವ ಶಿವರಾಮ್ ಹೆಬ್ಟಾರ್, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಶಾಸಕರಾದ ಪುಟ್ಟರಾಜು, ತಮ್ಮಣ್ಣ, ಅನ್ನದಾನಿ, ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ರೈತ ನಾಯಕಿ ಸುನಂದಾ ಜಯರಾಂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.