ಗ್ರಾಪಂ ವ್ಯಾಪ್ತಿಯಲ್ಲಿ ಕ್ವಾರೆಂಟೈನ್ ಕೇಂದ್ರ ಸ್ಥಾಪಿಸಿ
Team Udayavani, May 30, 2020, 7:37 AM IST
ಕೊಪ್ಪ: ತಾಲೂಕಿನ ಪ್ರತಿ ಗ್ರಾಪಂ ವ್ಯಾಪ್ತಿಯ ಒಂದು ಶಾಲೆಯನ್ನು ಗುರುತಿಸಿ, ಕೋವಿಡ್ ಗೆ ಸಂಬಂಧಪಟ್ಟಂತೆ ಪ್ರತ್ಯೇಕ ಕೊಠಡಿಗಳಲ್ಲಿ ಕ್ವಾರೈಂಟೈನ್‌ಗೆ ಅಗತ್ಯವಾದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದರು.
ಬಾಳಗಡಿಯ ತಾಪಂ ಸಭಾಂಗಣದಲ್ಲಿ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ವೈರಸ್ ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂದು ನಿರೀಕ್ಷಿಸಲು ಆಸಾಧ್ಯವಾಗಿದೆ. ಆದ್ದರಿಂದ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದರು.
ತಾಲೂಕು ವೈದ್ಯಾಧಿಕಾರಿ ಮಹೇಂದ್ರ ಕಿರೀಠಿ ಮಾತನಾಡಿ, ಕೊಪ್ಪದಲ್ಲಿ ಸಾಂಸ್ಥಿಕ ಕ್ವಾರೆಂಟೈನ್ ಮಾಡಲಾಗಿದ್ದ 10 ಜನರಲ್ಲಿ ಕೋವಿಡ್ ಪಾಸಿಟಿವ್ ಸೋಂಕು ಕಾಣಿಸಿಕೊಂಡಿದೆ. ಇವರು ಮುಂಬೈನಿಂದ ಬಂದವರು. ಅದರಲ್ಲಿಯೂ ಎನ್. ಆರ್ ಪುರ ಮೂಲದ ಎಂಟು ಜನ ಹಾಗೂ ತೀರ್ಥಹಳ್ಳಿ ಮೂಲದ ಒಬ್ಬರು ಹಾಗೂ ಕೊಪ್ಪದ ಒಬ್ಬ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಇವರನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದರು. ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ| ಗಾನವಿ, ಆಹಾರ ನಿರೀಕ್ಷಕ ಶ್ರೀಕಾಂತ್, ತಾಪಂ ಇಒ ನವೀನ್ ಕುಮಾರ್ ಮಾತನಾಡಿದರು.
ಸಭೆಯಲ್ಲಿ ಶಾಸಕ ರಾಜೇಗೌಡ, ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ತಾಪಂ ಅಧ್ಯಕ್ಷೆ ಜಯಂತಿ ನಾಗರಾಜ್, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ದಿವ್ಯಾ ದಿನೇಶ್, ಸದಸ್ಯರಾದ ಎಸ್.ಎನ್. ರಾಮಸ್ವಾಮಿ, ಡಿವೈಎಸ್‌ಪಿ ರಾಜು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.