ಸಂಜೆ 7ರಿಂದ 36 ತಾಸು ನಿಷೇಧಾಜ್ಞೆ: ಡಿಸಿ ಆದೇಶ
Team Udayavani, May 30, 2020, 8:29 AM IST
ಸಾಂದರ್ಭಿಕ ಚಿತ್ರ
ಧಾರವಾಡ: ಕೋವಿಡ್ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮೇ 31 ರವಿವಾರದಂದು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
ಈ ಆದೇಶವು ಮೇ 30ರಂದು ಸಂಜೆ 7ರಿಂದ ಜೂ 1ರ ಬೆಳಗ್ಗೆ 7 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ ಹಾಗೂ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿರುತ್ತದೆ. 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ-ಸಮಾರಂಭ ಜರುಗಿಸುವುದನ್ನು ನಿಷೇಧಿಸಿದ್ದು, ಕರ್ಫ್ಯೂ ಅವಧಿಯಲ್ಲಿ ಸಾರ್ವಜನಿಕರು ತುರ್ತು ವೈದ್ಯಕೀಯ ಕಾರ್ಯ ಹೊರತು ಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿರ್ಬಂಧಿ ಸಲಾಗಿದೆ. ಕರ್ಫ್ಯೂ ಅವಧಿಯಲ್ಲಿ ಜಿಲ್ಲೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಶವ ಸಂಸ್ಕಾರ ಕಾರ್ಯದಲ್ಲಿ ಕೇವಲ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.
ಸರಕಾರಿ ವಾಹನಗಳಿಗೆ ಮತ್ತು ಕೋವಿಡ್ -19 ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಈ ಅವಧಿಯಲ್ಲಿ ಕಿರಾಣಿ ಅಂಗಡಿಗಳು, ತರಕಾರಿ ಅಂಗಡಿಗಳು, ಹಾಲು-ಮೊಸರು, ಚಿಕನ್, ಮಟನ್ ಹಾಗೂ ಇತರೆ ಅವಶ್ಯಕ ವಸ್ತುಗಳ ಸೇವೆಗಳು ಲಭ್ಯವಿರುತ್ತವೆ. ಹೋಟೆಲ್ ಗಳು ಪಾರ್ಸಲ್ ಸೇವೆ ಮಾತ್ರ ನೀಡಬಹುದು. ಹುಬ್ಬಳ್ಳಿ ರೈಲು ನಿಲ್ದಾಣದಿಂದ ಪಶ್ಚಿಮ ಬಂಗಾಳಕ್ಕೆ ವಲಸೆ ಕಾರ್ಮಿಕರಿಗೆ ರೈಲು ನಿಯೋಜಿತವಾಗಿರುವುದರಿಂದ ಅಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಪ್ರಯಾಣ ಮಾಡಲು ಆಗಮಿಸುವ ವಲಸೆ ಕಾರ್ಮಿಕರಿಗೆ ಹಾಗೂ ವಲಸೆ ಕಾರ್ಮಿಕರಿಗೆ ವಿವಿಧ ಸೌಲಭ್ಯ ಒದಗಿಸುವಂತಹ ವ್ಯಕ್ತಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ, ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.