ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಸಹಾಯವಾಣಿ ಆರಂಭ
Team Udayavani, May 30, 2020, 9:23 AM IST
ಹುಬ್ಬಳ್ಳಿ: ಕೋವಿಡ್ ಸಂಕಷ್ಟ, ಲಾಕ್ಡೌನ್ ಹಿನ್ನೆಲೆಯಲ್ಲಿ ಕಡಿಮೆ ವೇತನದ ಉದ್ಯೋಗಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಆರಂಭಿಸಿರುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ(ಪಿಎಂಜಿಕೆವೈ)ಅಡಿ ನೆರವಿಗೆ ಕಾರ್ಮಿಕರ ಭವಿಷ್ಯನಿಧಿ ಸಂಘಟನೆ ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ.
ಗರಿಷ್ಠ 100 ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳ ಉದ್ಯೋಗಿಗಳಲ್ಲಿ ಮಾಸಿಕ 15,000ಕ್ಕಿಂತ ಕಡಿಮೆ ವೇತನ ಪಡೆಯುವ ಕಾರ್ಮಿಕರಿಗೆ ಮಾರ್ಚ್ನಿಂದ ಆಗಸ್ಟ್ ವರೆಗೆ ಆರು ತಿಂಗಳವರೆಗೆ, ಮಾಸಿಕ ವೇತನದ ಶೇ. 24 ಹಣವನ್ನು ಉದ್ಯೋಗಿಗಳ ಇಪಿಎಫ್ ಖಾತೆಗೆ ನೇರವಾಗಿ ಪಾವತಿಸಲಾಗುತ್ತಿದೆ. ಮಾಸಿಕ 15,000ಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ. ಯೋಜನೆ ಕುರಿತಾದ ಮಾಹಿತಿ ನೀಡಲು, ಸಂದೇಹಗಳನ್ನು ಪರಿಹರಿಸಲು ಹುಬ್ಬಳ್ಳಿಯಲ್ಲಿನ ಕಾರ್ಮಿಕರ ಭವಿಷ್ಯನಿಧಿ ಸಂಘಟನೆ ಪ್ರಾದೇಶಿಕ ಕಚೇರಿ ಸಹಾಯವಾಣಿ ಆರಂಭಿಸಿದೆ. ಪಾದೇಶಿಕ ಕಚೇರಿ ವ್ಯಾಪ್ತಿಯ ಹುಬ್ಬಳ್ಳಿ ಕಚೇರಿಯಲ್ಲಿ ದೂ: 91836-2323860, ಬೆಳಗಾವಿ ಜಿಲ್ಲಾ ಕಚೇರಿ ದೂ: 91831-2466513 ಹಾಗೂ ಉತ್ತರ ಕನ್ನಡ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 91838-2227766 ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ಭವಿಷ್ಯನಿಧಿ ಕಚೇರಿ ಪ್ರಾದೇಶಿಕ ಆಯುಕ್ತ ಮಿಹೀರ ಕುಮಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.