ಕ್ವಾರಂಟೈನ್ ಮುಗಿಸಿ ಬಂದವರಿಗೂ ಸೋಂಕು ದೃಢ: ಉಡುಪಿಯಲ್ಲಿಂದು 13 ಜನರಿಗೆ ಸೋಂಕು ಪತ್ತೆ
Team Udayavani, May 30, 2020, 5:07 PM IST
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ ಮತ್ತೆ 13 ಹೊಸ ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 177ಕ್ಕೆ ಏರಿಕೆಯಾಗಿದೆ.
ಇಂದಿನ ಪ್ರಕರಣಗಳ ಪೈಕಿ ಒಬ್ಬರು ತೆಲಂಗಾಣದಿಂದ ಬಂದಿದ್ದರೆ, ಉಳಿದವರೆಲ್ಲಾ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ದರಲ್ಲಿ ಎರಡು ವರ್ಷದ ಮಗುವೂ ಸೇರಿದೆ.
ಮಹಾರಾಷ್ಟ್ರದಿಂದ ಪುಣೆಯಿಂದ ಆಗಮಿಸಿದ ಕೋಟದ ಬಾರಿಕೆರೆಯ ಮಹಿಳೆ 14 ದಿನದಿಂದ ಕುಂದಾಪುರದಲ್ಲಿ ಕ್ವಾರಂಟೈನ್ ನಲ್ಲಿದ್ದರು. ಆದರೆ ರಿಪೋರ್ಟ್ ಲಭ್ಯವಾಗುವ ಮುನ್ನವೇ ಮೇ 28 ರಂದು ಸಂಜೆ ಮನೆಗೆ ಬಂದಿದ್ದು ಮೇ 29ರ ರಾತ್ರಿಯ ವೇಳೆಗೆ ಪಾಸಿಟಿವ್ಎಂದು ತಿಳಿದು ಬಂದಿದೆ.
ಜಿಲ್ಲೆಯಲ್ಲಿ ಶುಕ್ರವಾರ 15 ಜನರಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಇಂದು ಮತ್ತೆ 13 ಮಂದಿಗೆ ಸೋಂಕು ತಾಗಿತ್ತು ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 177 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಕೋವಿಡ್ ಸೋಂಕಿನಿಂದ ಗುಣಮುಖರಾದ 17 ಮಕ್ಕಳು ಸೇರಿ 45 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಸೋಂಕು ಪತ್ತೆಯಾಗಿದ್ದ ನಾಲ್ವರು ಪೊಲೀಸರು ಕೂಡಾ ಇಂದು ಗುಣಮುಖರಾಗಿ ಬಿಡುಗಡೆಯಾದರು.
ರಾಜ್ಯದಲ್ಲಿಂದು ಹೊಸ 141 ಕೋವಿಡ್-19 ಪ್ರಕರಣಗಳು ದೃಢವಾಗಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 103 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ 997ಕ್ಕೆ ಏರಿಕೆಯಾಗಿದೆ. ಒಟ್ಟು 49 ಮಂದಿ ಸೋಂಕಿನ ಕಾರಣದಿಂದ ಮೃತಪಟ್ಟರೆ, ಇಬ್ಬರು ಸೋಂಕಿತರು ಕೋವಿಡ್19 ಅಲ್ಲದ ಅನ್ಯ ಕಾರಣದಿಂದ ಮರಣ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.