ಆಶಾ ಕಾರ್ಯಕರ್ತೆಯರಿಗೆ ಸೂಕ್ತ ರಕ್ಷಣೆ ಒದಗಿಸಿ

ಜಿಲ್ಲಾದ್ಯಂತ ಪ್ರತಿಭಟನೆ ಕಾರ್ಯಕರ್ತೆಯರ ಮೇಲಿನ ಹಲ್ಲೆಗೆ ಖಂಡನೆ-ಮನವಿ

Team Udayavani, May 30, 2020, 12:59 PM IST

30-May-09

ಬಳ್ಳಾರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು

ಬಳ್ಳಾರಿ: ಕೋವಿಡ್ ವೈರಸ್‌ ನಿಯಂತ್ರಿಸುವಲ್ಲಿ ಫ್ರಂಟ್‌ಲೈನ್ ‌ ವಾರಿಯರ್ಸ್‌ನಂತೆ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗಳನ್ನು ಖಂಡಿಸಿ, ಸೂಕ್ತ ರಕ್ಷಣೆಗೆ ಆಗ್ರಹಿಸಿ ಮತ್ತು ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ “ಆಶಾ ಸಂರಕ್ಷಣಾ ದಿನ’ದ ಅಂಗವಾಗಿ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದಿಂದ ನಗರದ ಡಿಸಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕೋವಿಡ್ ವೈರಸ್‌, ಲಾಕ್‌ಡೌನ್‌ನಿಂದಾಗಿ ಎಲ್ಲರೂ ಮನೆಗಳಲ್ಲೇ ಇರಬೇಕಿದ್ದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗುತೊರೆದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾ ವೈರಸ್‌ ಹರಡುವಿಕೆಯನ್ನು ತಡೆಗಟ್ಟಲು ಶ್ರಮಿಸುತ್ತಿದ್ದಾರೆ. ರಾಜ್ಯಾದ್ಯಂತ ಕಳೆದ 2 ತಿಂಗಳಿಂದ ಅವಿರತ ಸೇವೆಯಲ್ಲಿರುವ “ಫ್ರಂಟ್‌ ಲೈನ್‌ ವಾರಿಯರ್’ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗಳು ದಿನದಿಂದ ದಿನ ಹೆಚ್ಚಾಗುತ್ತಿರುವುದು, ಆಶಾ ಸಮುದಾಯಕ್ಕೆ ತುಂಬಾ ಭಯ-ಆತಂಕವನ್ನು ಉಂಟು ಮಾಡಿದೆ. ಕೋವಿಡ್ ವೈರಸ್‌ ತಡೆಗೆ ಪ್ರತಿ ದಿನ ಮನೆ-ಮನೆಗೆ ತೆರಳುವ ಆಶಾ ಕಾರ್ಯಕರ್ತೆಯರು ಕೆಲ ಪುಂಡರ ಮತ್ತು ಪಾನಮತ್ತರ ಕೆಂಗಣ್ಣಿಗೆ ಬಲಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 29ರಂದು “ಆಶಾ ಸಂರಕ್ಷಣಾ ದಿನ’ವೆಂದು ಘೋಷಿಸಿ ರಾಜ್ಯ ವ್ಯಾಪಿ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದರು.

ಹಲ್ಲೆಗೊಳಗಾದ ಆಶಾ ಕುಟುಂಬದ ಸದಸ್ಯರು ಲಾಕ್‌ ಡೌನ್‌ನಿಂದಾಗಿ ಕೆಲಸ, ಆದಾಯ ಎರಡೂ ಕಳೆದುಕೊಂಡಿದ್ದಾರೆ. ಮತ್ತೊಂದೆಡೆ ಇವರ ಗೌರವಧನದಿಂದ ಸಂಸಾರ ನಡೆಸುವುದು ಕಷ್ಟ ಸಾಧ್ಯವಾಗಿರುತ್ತದೆ. ಆದ್ದರಿಂದ ಹಗಲು-ಇರುಳು ಇಲಾಖೆ ಕೆಲಸಕ್ಕೆ ಕೈಜೋಡಿಸಿರುವ ಇವರಿಗೆ ಮಾರ್ಚ್‌ ತಿಂಗಳಿಂದ ಕೋವಿಡ್‌-19 ಕಾರ್ಯ ನಿಯೋಜನೆ ಮುಗಿಯುವವರೆಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು. ಅಗತ್ಯವಿರುವಷ್ಟು ಮಾಸ್ಕ್, ಸ್ಯಾನಿಟೈಸರ್‌ಗಳನ್ನು ಒದಗಿಸಬೇಕು. ಕೋವಿಡ್‌ -19 ಸೇವೆಯಲ್ಲಿರುವಾಗ ರಾಜ್ಯದಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ 50 ಲಕ್ಷ ರೂ. ವಿಮೆ ಸೌಲಭ್ಯವನ್ನು ನೀಡುವ ಬಗ್ಗೆ ಖಾತರಿ ಪಡಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದಾರೆ. ಬಳಿಕ ಜಿಲ್ಲಾಡಳಿತದ ಮೂಲಕ ಸಿಎಂ ಯಡಿಯೂರಪ್ಪರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಲಕ್ಷ್ಮೀ, ಎ.ದೇವದಾಸ್‌, ಎ.ಶಾಂತಾ, ಗೀತಾ, ರಾಮಕ್ಕ ಸೇರಿ ಹಲವಾರು ಆಶಾ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

BS-yadiyurappa

Covid Scam: ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.