ಕಾಸರಗೋಡು: ಮೂವರಿಗೆ ಸೋಂಕು
Team Udayavani, May 31, 2020, 5:54 AM IST
ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ ಮೂವರಿಗೆ ಕೋವಿಡ್-19 ಸೋಂಕು ಖಚಿತಗೊಂಡಿದೆ. ಮೇ 19ರಂದು ಕುವೈಟ್ನಿಂದ ಆಗಮಿಸಿದ್ದ 33 ವರ್ಷ ಪ್ರಾಯದ ಪಿಲಿಕೋಡ್ ನಿವಾಸಿ, ಮೇ 17ರಂದು ದುಬಾೖಯಿಂದ ಆಗಮಿಸಿದ್ದ 68 ವರ್ಷ ಪ್ರಾಯದ ಮಧೂರು ನಿವಾಸಿ, ಮೇ 21ರಂದು ಮಹಾರಾಷ್ಟ್ರದಿಂದ ಬಂದಿದ್ದ 29 ವರ್ಷ ಪ್ರಾಯದ ಚೆಮ್ನಾಡ್ ನಿವಾಸಿಗೆ ರೋಗ ಖಚಿತವಾಗಿದೆ.
ಜಿಲ್ಲೆಯಲ್ಲಿ ಒಟ್ಟು 3,595 ಮಂದಿ ನಿಗಾದಲ್ಲಿದು, 413 ಮಂದಿ ಶನಿವಾರ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ಶನಿವಾರ ನೂತನವಾಗಿ 343 ಮಂದಿಯನ್ನು ಐಸೊಲೇಶನ್ ವಾರ್ಡ್ಗೆ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ 6,902 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 6,020 ಮಂದಿಯ ತಪಾಸಣೆ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ ಈಗ ಒಟ್ಟು 73 ಮಂದಿ ಕೊರೊನಾ ರೋಗಿಗಳಿದ್ದಾರೆ.
ಮಾಸ್ಕ್ ಧರಿಸದ 197 ಮಂದಿಗೆ ಕೇಸು
ಮಾಸ್ಕ್ ಧರಿಸಿದೇ ಇದ್ದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 197 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 3,748 ಮಂದಿ ವಿರುದ್ಧ ಕೇಸು ದಾಖಲಿಸಿ, ದಂಡ ವಸೂಲಿ ಮಾಡಲಾಗಿದೆ.
ನಿಷೇಧಾಜ್ಞೆ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 18 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.
ಮಂಜೇಶ್ವರ ಚೆಕ್ಪೋಸ್ಟ್ನಿಂದ 582 ಮಂದಿ ಕೇರಳ ಪ್ರವೇಶ
ಇತರ ರಾಜ್ಯಗಳಿಂದ ಮಂಜೇಶ್ವರ ಚೆಕ್ಪೋಸ್ಟ್ ಮೂಲಕ 582 ಮಂದಿ ಕೇರಳ ಪ್ರವೇಶ ಮಾಡಿದ್ದಾರೆ. ಈ ವರೆಗೆ ಮಂಜೇಶ್ವರ ಚೆಕ್ಪೋಸ್ಟ್ ಮೂಲಕ 22,523 ಮಂದಿ ಕೇರಳಕ್ಕೆ ಆಗಮಿಸಿದ್ದಾರೆ. ಒಟ್ಟು 41,612 ಮಂದಿಗೆ ಪಾಸ್ ಮಂಜೂರು ಮಾಡಲಾಗಿದೆ. ಕಾಸರಗೋಡು ಜಿಲ್ಲೆಯವರಾದ 5,199 ಮಂದಿ ಮಂಜೇಶ್ವರ ಚೆಕ್ಪೋಸ್ಟ್ ಮೂಲಕ ಈ ವರೆಗೆ ಊರಿಗೆ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.