ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉಗುಳುವಂತಿಲ್ಲ

Team Udayavani, May 31, 2020, 8:02 AM IST

tobbaccco spirt

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಹಾಗೂ ಪಾನ್‌ ಮಸಾಲ ಉತ್ಪನ್ನ ಸೇವಿಸಿ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನಿಯಮ, ಉಲ್ಲಂಘಿಸಿದರೆ ಕಾನೂನು ಕ್ರಮಕೈಗೊಳ್ಳುವ  ಎಚ್ಚರಿಕೆ ನೀಡಿದೆ. ವಿಶ್ವ ತಂಬಾಕು ರಹಿತ ದಿನ ಅಂಗವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಲು, ಕೊರೊನಾ ಪಿಡುಗು ಪರಿಣಾಮಕಾರಿ ನಿಯಂತ್ರಿಸುವ ನಿಟ್ಟಿನಲ್ಲಿ ಯಾವುದೇ  ರೀತಿಯ ತಂಬಾಕು, ಪಾನ್‌ ಮಸಾಲ ಸಾರ್ವಜನಿಕ ಸ್ಥಳಗಳಲ್ಲಿ ಸೇವಿಸಿ ಉಗುಳುವುದು ನಿರ್ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಗುಟ್ಕಾ ನಿಷೇಧಿಸಿದ ಬಳಿಕ ಅಡಕೆ ಹಾಗೂ ತಂಬಾಕು ಚೀಟಿಗಳನ್ನು ಬೇರೆ ಮಾಡಿ ಪೂರೈಕೆ ಹಾಗೂ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕಿದೆ. ಹೀಗಾಗಿ ಯಾವುದೇ ರೀತಿಯ ಜಗಿಯುವ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸೇವಿಸಿ, ಉಗುಳುವುದನ್ನು ನಿಷೇಧಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಆರೋಗ್ಯ ರಕ್ಷಣೆ: ವಿಶ್ವ ಆರೋಗ್ಯ ಸಂಸ್ಥೆಯ ಇತ್ತೀಚಿನ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್‌ ಉತ್ಪನ್ನಗಳನ್ನು ಬಳಕೆ ಮಾಡುವವರ ಪ್ರಮಾಣ ಶೇ.28ರಿಂದ 22ಕ್ಕೆ ಇಳಿದಿದೆ. ತಂಬಾಕು ಚಟದಿಂದ ಯುವಪೀಳಿಗೆಯನ್ನು ರಕ್ಷಿಸುವುದು, ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಸರ್ಕಾರ ಇಂತಹ ಕ್ರಮವನ್ನು ವಿಶ್ವ ತಂಬಾಕು ರಹಿತ ದಿನಾಚರಣೆಯ ಮುನ್ನಾ ದಿನವೇ ಕೈಗೊಂಡು ಈ ಕುರಿತು ಆದೇಶ ಹೊರಡಿಸಿದೆ ಎಂದರು.

ಜಗಿಯುವ ತಂಬಾಕು ಉತ್ಪನ್ನಗಳು, ನಿಕೋಟಿನ್‌ ಪದಾರ್ಥಗಳು ಹಾಗೂ ಪಾನ್‌ ಮಸಾಲ್‌ ಜಗಿದು ಉಗುಳುವುದನ್ನು ನಿಷೇಧ ಮಾತ್ರವಲ್ಲ, ಪರಿಣಾಮಕಾರಿ ಅನುಷ್ಠಾನ ಹಾಗೂ ಉಲ್ಲಂಘಿಸಿದರ ವಿರುದಟಛಿ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ರೀತ್ಯ ಅಗತ್ಯ ಕ್ರಮವಹಿಸುವುದಕ್ಕೂ ಸರ್ಕಾರ ಆದೇಶಿಸಲಾಗಿದೆ ಎಂದು ತಿಳಿಸಿದರು.

ಉಲ್ಲಂಘಿಸಿದರೆ ಜೈಲು: ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಹಾಗೂ ಪಾನ್‌ ಮಸಾಲ ಉತ್ಪನ್ನಗಳ ಸೇವನೆ ಹಾಗೂ ಉಗುಳುವುದು ನಿಷೇಧಿಸುವ ಆದೇಶ ಉಲ್ಲಂಘಿಸಿದವರ ವಿರುದ ಐಪಿಸಿ ಸೆಕ್ಷನ್‌ 188 (ಸರ್ಕಾರಿ ಆದೇಶಕ್ಕೆ  ಅವಿಧೇಯತೆ)ಡಿ 6 ತಿಂಗಳ ಸಾದಾ ಸಜೆ, 1000 ರೂ. ದಂಡ, ಸೆಕ್ಷನ್‌ 268 (ಅನುಚಿತ ವರ್ತನೆ) 269 (ಜೀವಕ್ಕೆ ಅಪಾಯಕಾರಿ ಸೋಂಕು ಹರಡುವಿಕೆ ಗೊತ್ತಿದ್ದರೂ ಉದಾಸೀನತೆ)ರಡಿ 6 ತಿಂಗಳ ಸಾದಾ ಶಿಕ್ಷೆ ಹಾಗೂ ಐಪಿಸಿ 270 (ಸಾರ್ವಜನಿಕರ ಸೋಂಕು ಹರಡಿಸುವ ಅಪಾಯಕಾರಿ ನಡವಳಿಕೆ)ರಡಿ 2 ವರ್ಷ ಜೈಲು ಶಿಕ್ಷೆ ವಿಧಿಸುವಂತಹ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.