ಸೋಂಕಿತರ ಮೇಲೆ ಐಎಸ್‌ಐ ಕಣ್ಗಾವಲು!

Team Udayavani, May 31, 2020, 9:44 AM IST

ಸೋಂಕಿತರ ಮೇಲೆ ಐಎಸ್‌ಐ ಕಣ್ಗಾವಲು!

ಇಸ್ಲಾಮಾಬಾದ್‌: ಭಾರತವೂ ಸೇರಿ ವಿಶ್ವಾದ್ಯಂತ ಕೋವಿಡ್‌ ರೋಗಿಗಳ ಮೇಲೆ, ಶಂಕಿತ ರೋಗಿಗಳ ಮೇಲೆ ಆರೋಗ್ಯ ಕಾರ್ಯಕರ್ತರು, ಆಡಳಿತ ವರ್ಗ ಕಣ್ಣಿಟ್ಟಿದ್ದರೆ, ಪಾಕಿಸ್ಥಾನದಲ್ಲಿ ಇದರ ಕಥೆಯೇ ಬೇರೆ.

ಅಲ್ಲಿ ಕೋವಿಡ್‌ ರೋಗಿಗಳ ಮೇಲೆ ಕಣ್ಣಿಡುವುದು ಸಾಧ್ಯವಾಗುತ್ತಿಲ್ಲ ಎಂದು ಖುದ್ದು ಗೂಢಚರ ಸಂಸ್ಥೆ ಐಎಸ್‌ಐಯೇ ಕಣ್ಗಾವಲು ಇಟ್ಟಿದೆ.

ಇದಕ್ಕೆ ಸರಕಾರವೇ ಅನುವು ಮಾಡಿಕೊಟ್ಟಿದೆ. ತಂತ್ರಜ್ಞಾನ ಆಧರಿತವಾಗಿ ಇವರನ್ನು ಟ್ರ್ಯಾಕ್‌ ಮಾಡಲಾಗುತ್ತಿದೆ. ಅಚ್ಚರಿ ಎಂದರೆ ಈ ತಂತ್ರಜ್ಞಾನವನ್ನು ಉಗ್ರರರನ್ನು ಪತ್ತೆ ಹಚ್ಚಲು, ಅವರು ಎಲ್ಲೆಲ್ಲಿ ಸಂಚರಿಸುತ್ತಿದ್ದಾರೆ ಎಂಬುದನ್ನು ತಿಳಿಯಲು ಬಳಸಲಾಗುತ್ತದಂತೆ. ಆದರೆ ಯಾವ ರೀತಿಯ ತಂತ್ರಜ್ಞಾನ ಬಳಸಲಾಗುತ್ತದೆ ಎಂಬುದನ್ನು ಹೇಳಿಲ್ಲ. ಈ ವಿಚಾರವನ್ನು ಐಎಸ್‌ಐ ಅಧಿಕಾರಿಗಳೇ ಲೀಕ್‌ ಮಾಡಿದ್ದಾರೆ.

ಕೋವಿಡ್‌ ರೋಗಿಗಳನ್ನು ಟ್ರ್ಯಾಕ್‌ ಮಾಡಲು ಜಿಯೋ ಫೆನ್ಸಿಂಗ್‌ ಮತ್ತು ಫೋನ್‌ ಮಾನಿಟರಿಂಗ್‌ ವ್ಯವಸ್ಥೆಯನ್ನು ಅವರು ಹೆಚ್ಚಾಗಿ ಬಳಸುತ್ತಿದ್ದಾರೆ ಎಂದು ತಜ್ಞರು ಊಹಿಸುತ್ತಾರೆ. ಇದರಿಂದ ಅವರು ಒಂದು ನಿರ್ದಿಷ್ಟ ಪ್ರದೇಶ ದಾಟಿ ಹೋದ ಕೂಡಲೇ ಗುರುತಿಸಬಹುದು. ಈ ವಿಚಾರವನ್ನು ಬಳಿಕ ಆಡಳಿತಕ್ಕೆ ತಿಳಿಸುವ ಕೆಲಸವನ್ನು ಐಎಸ್‌ಐ ಮಾಡುತ್ತಿದೆ.

ಈ ವಿಧಾನ ಅಲ್ಲಿನ ಆಡಳಿತಕ್ಕೆ ಅತಿ ಪ್ರಯೋಜನಕಾರಿಯೂ ಆಗಿದೆಯಂತೆ. ಅಲ್ಲಿ ಕೋವಿಡ್‌ ಬಂದಿದೆ ಎಂದು ಗೊತ್ತಿದ್ದರೂ, ತಪ್ಪಿಸಿಕೊಳ್ಳುವವರು, ಚಿಕಿತ್ಸೆಗೆ ಹಾಜರಾಗದವರು, ಆಸ್ಪತ್ರೆ/ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳುವವರು ಹೆಚ್ಚಿದ್ದಾರಂತೆ. ಆದ್ದರಿಂದ ಐಎಸ್‌ಐ ಮೂಲಕ ಅವರ ಮೇಲೆ ಹೇಗೆ ಬೇಕಾದರೂ ಕಣ್ಣಿಡಬಹುದು ಎಂದು ಸರಕಾರ ಭಾವಿಸಿದೆ. ಐಎಸ್‌ಐ ಅಧಿಕಾರಿಗಳು ಸ್ಥಳೀಯ ಮತ್ತು ಪ್ರಾಂತ್ಯದ ಸರಕಾರದ ಮುಖ್ಯಸ್ಥರೊಂದಿಗೆ ನೇರ ಸಂಪರ್ಕದಲ್ಲಿದ್ದು ಕೊರೊನಾ ರೋಗಿಗಳ ಮಾಹಿತಿಗಳನ್ನು ನೋಡುತ್ತಿದ್ದಾರೆ. ಇಡೀ ದೇಶದಲ್ಲಿ ಕೋವಿಡ್‌ ಸೋಂಕನ್ನು ತಡೆಯಲು ಸರಕಾರ ಇನ್ನಿಲ್ಲದ ಯತ್ನ ಮಾಡುತ್ತಿದ್ದು ಏತನ್ಮಧ್ಯೆ ತಪ್ಪಿಸಿಕೊಂಡು ತಿರುಗಾಡುತ್ತಿರುವವರು ಇನ್ನಷ್ಟು ತಲೆನೋವು ತರುತ್ತಿದ್ದಾರೆ. ಇವರನ್ನು ನಿಯಂತ್ರಿಸುವುದು ಸವಾಲಾದ ಹಿನ್ನೆಲೆಯಲ್ಲಿ ಪ್ರಧಾನಿ ಇಮ್ರಾನ್‌ ಖಾನ್‌ ಐಎಸ್‌ಐಗೆ ಹೊಣೆ ವಹಿಸಿದ್ದಾರೆ ಎನ್ನಲಾಗಿದೆ.

ಇದರೊಂದಿಗೆ ಲಾಕ್‌ಡೌನ್‌ ಉಲ್ಲಂಘನೆ ವಿಚಾರದಲ್ಲಿ ಅಲ್ಲಿನ ಸೇನೆ ಇನ್ನಷ್ಟು ಕಠಿನ ನಿಲುವು ತಾಳುತ್ತಿದ್ದು, ಜನರ ವಿರುದ್ಧ ಬಿಗು ಕ್ರಮ ಕೈಗೊಳ್ಳುತ್ತಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.