ಗ್ರಾಪಂಗಳಿಗೆ ನಾಮನಿರ್ದೇಶನ ಮಾಡಿದರೆ ಹೋರಾಟ: ಶಾಸಕ ಗಣೇಶ
Team Udayavani, May 31, 2020, 1:01 PM IST
ಕಂಪ್ಲಿ: ಮೇ ಮತ್ತು ಜೂನ್ ತಿಂಗಳಲ್ಲಿ ಆಡಳಿತಾವಧಿ ಮುಗಿಸುತ್ತಿರುವ ಗ್ರಾಪಂಗಳಿಗೆ ನಾಮನಿರ್ದೇಶನ ಮಾಡಿದರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸ್ಥಳೀಯ ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.
ಅವರು ಪಟ್ಟಣದ ತಮ್ಮ ನಿವಾಸದ ಜನಸಂಪರ್ಕ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕಂಪ್ಲಿ ವಿಧಾನಸಭಾ ಕ್ಷೇತ್ರದ 28 ಗ್ರಾಮ ಪಂಚಾಯಿತಿಗಳಿಗೆ ನಾಮನಿರ್ದೇಶನ ಮಾಡುವ ಸಂಬಂಧ ಮಾಜಿ ಶಾಸಕ ಟಿ.ಎಚ್. ಸುರೇಶಬಾಬು ಕೆಲವರಿಂದ ದಾಖಲಾತಿಗಳನ್ನು ಪಡೆಯುವ ಮೂಲಕ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆಂದು ಆರೋಪಿಸಿದರು. ನಾಮನಿರ್ದೇಶನಕ್ಕಾಗಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಸಂಗ್ರಹಿಸುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರನ್ನು ಮತ್ತು ಗ್ರಾಮೀಣ ಜನತೆಯನ್ನು ದಾರಿತಪ್ಪಿಸುತ್ತಿದ್ದಾರೆ. ಅವರು ಗ್ರಾಮ ಪಂಚಾಯಿತಿಗೆ ನಾಮನಿರ್ದೇಶನ ಮಾಡುವ ಕುರಿತಂತೆ ಸರ್ಕಾರದಿಂದ ಜಾರಿಯಾಗಿಲ್ಲ. ನಾಗರಿಕರು, ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಶಾಸಕರ ಮಾತಿಗೆ ಮರುಳಾಗಬಾರದೆಂದು ಮನವಿ ಮಾಡಿದರು. ಕೆಪಿಸಿಸಿ ಸದಸ್ಯರಾದ ಕಲ್ಲುಕಂಬ ಪಂಪಾಪತಿ, ಎಚ್. ಮಹ್ಮದ್ ಗೌಸ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಟಗಿ ಬಸವರಾಜಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.