ಕೋವಿಡ್‌ ತಂದ ಆತಂಕ : ಶಸ್ತ್ರಚಿಕಿತ್ಸೆಯಿಂದ ಸಾವಿನ ಪ್ರಮಾಣ ಹೆಚ್ಚು?

Team Udayavani, May 31, 2020, 1:04 PM IST

ಕೋವಿಡ್‌ ತಂದ ಆತಂಕ : ಶಸ್ತ್ರಚಿಕಿತ್ಸೆಯಿಂದ ಸಾವಿನ ಪ್ರಮಾಣ ಹೆಚ್ಚು?

ಲಂಡನ್‌: ಕೋವಿಡ್‌ ಸೋಂಕಿತರು ಮುಂದೆ ಶಸ್ತ್ರಚಿಕಿತ್ಸೆಗೆ ಒಳಪಡುವುದಾದರೆ ಅಥವಾ ತೀವ್ರತರವಾದ ಆರೋಗ್ಯ ಸಮಸ್ಯೆಗಳಿಗೆ ಒಳಗಾದರೆ ಅದು ಸಾವಿನ ಅಪಾಯವನ್ನು ಹೆಚ್ಚಿಸುತ್ತದೆ ಎಂಬ ಆತಂಕಕಾರಿ ಮಾಹಿತಿಯನ್ನು ಜಾಗತಿಕ ಅಧ್ಯಯನವೊಂದು ವರದಿ ಮಾಡಿದೆ. ಕೋವಿಡ್‌ 19 ಹೆಚ್ಚಾಗಿ ಬಾಧಿಸುವುದು ಆರೋಗ್ಯದಲ್ಲಿ ಏರುಪೇರು ಇರುವವರನ್ನು ಎಂಬ ಮಾಹಿತಿ ಈಗಾಗಲೇ ಸ್ಪಷ್ಟಗೊಂಡಿದೆ. ಆದರೆ ರೋಗ ಗುಣಮುಖವಾದರೂ ಅದರ ಅಪಾಯ ಮುಂದೆಯೂ ಕಾಡುತ್ತದೆ ಎಂದು ಅಧ್ಯಯನ ಹೇಳಿದೆ.

ಏಷ್ಯಾ, ಆಫ್ರಿಕಾ ಮತ್ತು ಉತ್ತರ ಅಮೆರಿಕ ಖಂಡಗಳ 238 ಆಸ್ಪತ್ರೆಗಳಿಂದ 1128 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಿದ ರಾಷ್ಟ್ರೀಯ ಆರೋಗ್ಯ ಸಂಶೋಧನ ಸಂಸ್ಥೆ ಹಾಗೂ ಬರ್ಮಿಂಗ್‌ಹ್ಯಾಮ್‌ ವಿಶ್ವವಿದ್ಯಾನಿಲಯದ ಅಧ್ಯಯನ ತಂಡ ಈ ವಿಷಯವನ್ನು ಬಯಲಿಗೆಳೆದಿದೆ. ಮರಣದ ಪ್ರಮಾಣವೂ ಹಿಂದಿನ ಅಂಕಿ ಅಂಶಗಳಿಗೆ ಹೋಲಿಸಿದರೆ ಕೋವಿಡ್‌ ಅನಂತರದಲ್ಲಿ ಅಧಿಕವಾಗಿದೆ.

ಒಂದು ತಿಂಗಳು ನಡೆದ ಅಧ್ಯಯನದಲ್ಲಿ ಮರಣದ ಪ್ರಮಾಣವು ಶೇ. 23.8 ಎಂದು ದಾಖಲಾಗಿದೆ.
ಇದರಲ್ಲಿ ಆಯ್ಕೆಯ ಶಸ್ತ್ರ ಚಿಕಿತ್ಸೆ ಶೇ.18.9, ತುರ್ತುಶಸ್ತ್ರ ಚಿಕಿತ್ಸೆ ಶೇ.23.6, ಸಣ್ಣ ಶಸ್ತ್ರ ಚಿಕಿತ್ಸೆ ಶೇ. 16.3, ಹಾಗೂ ಕ್ಯಾನ್ಸರ್‌ ಶಸ್ತ್ರ ಚಿಕಿತ್ಸೆಗಳಲ್ಲಿ ಮರಣ ಹೊಂದಿದವರ ಸಂಖ್ಯೆ ಶೇ.26.9 ಆಗಿದೆ. ಇದು ಅಸಮತೋಲನ ಮರಣ ಪ್ರಮಾಣವೆಂದು ಅಧ್ಯಯನ ಸ್ಪಷ್ಟಪಡಿಸುತ್ತದೆ.

ಮರಣ ಪ್ರಮಾಣ ಪುರುಷರಲ್ಲೇ ಹೆಚ್ಚಿದೆ ಎಂದು ಅಧ್ಯಯನವು ಬೊಟ್ಟು ಮಾಡಿದೆ. ಮಹಿಳೆಯರ ಮರಣ ಪ್ರಮಾಣವು ಶೇ.18.2 ಹಾಗೂ ಪುರುಷರ ಮರಣ ಪ್ರಮಾಣವು ಶೇ.28.4 ಆಗಿದೆ. 70 ವರ್ಷಗಳ ಮೇಲ್ಪಟ್ಟವರಿಗೆ ನಡೆದ ಶಸ್ತ್ರ ಚಿಕಿತ್ಸೆಯಲ್ಲಿ ಶೇ. 33.7 ಹಾಗೂ 70 ವರ್ಷಕ್ಕಿಂತ ಕಡಿಮೆ ಹರೆಯದವರಿಗೆ ನಡೆದ ಶಸ್ತ್ರ ಚಿಕಿತ್ಸೆಯಲ್ಲಿ ಶೇ. 13.9 ಮರಣ ಪ್ರಮಾಣ ದಾಖಲಾಗಿದೆ.
ವಯಸ್ಸು, ಲಿಂಗವನ್ನು ಹೊರತು ಪಡಿಸಿ ಮೊದಲೇ ಅಸ್ತಿತ್ವದಲ್ಲಿರುವ ವೈದ್ಯಕೀಯ ಸಮಸ್ಯೆಗಳ ಜತೆಗೆ, ಕ್ಯಾನ್ಸರ್‌ ಶಸ್ತ್ರ ಚಿಕಿತ್ಸೆ ಹಾಗೂ ತೀವ್ರತರವಾದ ಆರೋಗ್ಯ ಸಮಸ್ಯೆಗಳು ಸಾವಿನ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂಬುದನ್ನು ಅಧ್ಯಯನ ದೃಢಪಡಿಸಿದೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.