ವರದಿ ಬರುವ ಮುನ್ನವೇ ಕ್ವಾರಂಟೈನ್ ನಿಂದ ಬಿಡುಗಡೆ: ಬೆಳಗಾವಿಯ ಇಬ್ಬರಿಗೆ ಪಾಸಿಟಿವ್ ಶಂಕೆ
Team Udayavani, May 31, 2020, 1:09 PM IST
ಬೆಳಗಾವಿ: ವರದಿ ಬರುವ ಮುನ್ನವೇ ಕ್ವಾರಂಟೈನ್ ನಲ್ಲಿ ಇದ್ದವರನ್ನು ಬಿಡುಗಡೆ ಮಾಡಿದ ಬಳಿಕ ಈಗ ಇಬ್ಬರಿಗೆ ಕೋವಿಡ್-19 ಪಾಸಿಟಿವ್ ಬಂದಿರುವ ಅನುಮಾನ ವ್ಯಕ್ತವಾಗುತ್ತಿದ್ದು, ಅಧಿಕಾರಿಗಳ ಎಡವಟ್ಟು ಜನರ ಆತಂಕಕ್ಕೆ ಕಾರಣವಾಗಿದೆ.
ಮುಂಬೈನಿಂದ ಬಂದಿರುವ ವಲಸೆ ಕಾರ್ಮಿಕರನ್ನು ತಾಲೂಕಿನ ಅಗಸಗಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಿ ಇಡಲಾಗಿತ್ತು. ಆದರೆ ವರದಿ ಬರುವ ಮುನ್ನವೇ ಅಧಿಕಾರಿಗಳು ಎಲ್ಲರನ್ನೂ ವಾಪಸ್ಸು ಕಳುಹಿಸಿದ್ದಾರೆ. ಗಂಟಲು ದ್ರವದ ಮಾದರಿ ಕಳುಹಿಸಿದಾಗ ಇಬ್ಬರಿಗೆ ಸೋಂಕು ಬಂದಿರುವ ಶಂಕೆ ವ್ಯಕ್ತವಾಗುತ್ತಿದೆ.
ಕ್ವಾರಂಟೈನ್ ನಲ್ಲಿ ಇದ್ದವರು ಬಿಡುಗಡೆ ಆಗುತ್ತಿದ್ದಂತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿದ್ದರು.ಈ ವಿಷಯ ತಿಳಿದು ಬಿಜೆಪಿ ಕಾರ್ಯಕರ್ತರೂ ಬಂದು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಬಿಡುಗಡೆಯಾದ ಬಳಿಕ ಗ್ರಾಮದಲ್ಲಿ ಅನೇಕರ ಸಂಪರ್ಕದಲ್ಲಿ ಬಂದಿದ್ದರು. ಈಗ ಗ್ರಾಮದಲ್ಲಿ ಅನೇಕರಲ್ಲಿ ಭಯ ಕಾಡುತ್ತಿದೆ.
ವರದಿ ಮುನ್ನವೇ ಇಬ್ಬರಿಗೆ ಪಾಸಿಟಿವ್ ಬಂದಿರುವ ಅನುಮಾನದಿಂದಾಗಿ ಆರೋಗ್ಯ ಇಲಾಖೆಯವರು ಮನೆಗೆ ಬಂದು ಕರೆದುಕೊಂಡು ಹೋಗಿದ್ದಾರೆ. ಅಧಿಕಾರಿಗಳ ಎಡವಟ್ಟು ಮಾಡಿದ್ದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.